

ಚಿತ್ರದುರ್ಗ: ಖಾಸಗಿ ಶಾಲೆಯೊಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಘಟನೆಯು ಚಳ್ಳಕೆರೆ ತಾಲ್ಲೂಕಿನ ಚಿನ್ಮಯ್ ಶಾಲೆಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನೆಟ್ಟಿಗರು ಶಾಲೆಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಶಾಲೆ ಮುಂಭಾಗ ಇರುವ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಪತ್ತೆಯಾಗಿದ್ದು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.