ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿ ಅನೈರ್ಮಲ್ಯ!

19ark2
Published on

ಅರಕಲಗೂಡು: ಪಟ್ಟಣದ ಹೃದಯ ಭಾಗದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿ ತ್ಯಾಜ್ಯದ ವಸ್ತುಗಳು ಸಂಗ್ರಹವಾಗಿದ್ದು, ಅನೈರ್ಮಲ್ಯ ತಾಂಡವಾಡುತ್ತಿದೆ.

ಪಟ್ಟಣದ ಅನಕೃ ಬಡಾವಣೆಯ ಪ್ರವೇಶ ದ್ವಾರದಲ್ಲಿರುವ ಗ್ರಂಥಾಲಯದ ಆವರಣದಲ್ಲಿ ಮದ್ಯದ ಬಾಟಲಿ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಬಿಸಾಕಲಾಗಿದೆ. ಇದರಿಂದ ಅಶುಚಿತ್ವ ತಾಂಡವವಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ವ್ಯಕ್ತಿಯೊಬ್ಬರಿಗೆ ಕರೊನಾ ಪಾಸಿಟಿವ್ ಕಾಣಿಸಿಕೊಂಡ ಕಾರಣ ಇತ್ತೀಚೆಗೆ ಗ್ರಂಥಾಲಯ ರಸ್ತೆಯನ್ನು ಸೀಲ್‌ಡೌನ್ ಮಾಡಲಾಗಿತ್ತು. ಹೀಗಾಗಿ ರಸ್ತೆಯಲ್ಲಿ ಜನರು ಓಡಾಡುವುದು ವಿರಳವಾಗಿತ್ತು. ಇದನ್ನು ಪ್ರಯೋಜನ ಪಡೆದ ಕೆಲವರು ಮದ್ಯದ ಬಾಟಲಿ, ಕಸ, ಕಡ್ಡಿ ಹಾಗೂ ತ್ಯಾಜ್ಯ ಎಸೆದು ಹೋಗಿದ್ದಾರೆ. ಕೂಡಲೇ ಇಂತಹ ಕೃತ್ಯಕ್ಕೆ ಕಡಿವಾಣ ಹಾಕಿ ಗ್ರಂಥಾಲಯ ಆವರಣವನ್ನು ಸ್ವಚ್ಛಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net