ಬಂದ್‌ಗೆ ನಂಜನಗೂಡಿನಲ್ಲಿ ನೀರಸ ಪ್ರತಿಕ್ರಿಯೆ

22 njd newsss 01
ಪಟ್ಟಣದ ಅಂಗಡಿ ಬೀದಿಯಲ್ಲಿ ಎಂದಿನಂತೆ ಕಂಡು ಬಂದ ಜನಸಂದಣಿ.
Published on

ನಂಜನಗೂಡು: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಮರಾಠಿಗರಿಂದ ನಡೆದ ದಾಳಿ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್‌ಗೆ ಪಟ್ಟಣದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿವಿಧ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವುದು, ಕನ್ನಡಿಗರ ಮೇಲೆ ಪರಭಾಷಿಕರ ದಾಳಿ ತಡೆಯುವುದು, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧ, ಕಳಸಾ ಬಂಡೂರಿ ಮಹದಾಯಿ ಯೋಜನೆ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಅದರಂತೆ ಪಟ್ಟಣದಲ್ಲಿ ಕೆಲವರು ಮಾತ್ರವೇ ಬಂದ್‌ಗೆ ನೇರ ಬೆಂಬಲ ಸೂಚಿಸಿದ್ದ ಹಿನ್ನೆಲೆ ನಂಜನಗೂಡು ಪಟ್ಟಣದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು. ಅಂಗಡಿ ಮುಂಗಟ್ಟುಗಳು ಎಂದಿನಂತೆ ವ್ಯಾಪಾರ- ವಹಿವಾಟು ನಡೆಸಿದವು. ಸಾರಿಗೆ ಸಂಪರ್ಕ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ಕಂಡುಬಂದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net