ಸಚಿವ ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ

CT Ravi
Published on

ರಾಯಚೂರು: ಮಹಿರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕಾರಿ ಚಂದ್ರಶೇಖರನ್ ಆತ್ಮಹತ್ಯೆಗೆ ಕಾರಣರಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಅಕಾರಿ ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ ಸಚಿವರ ಹಾಗೂ ಹಿರಿಯ ಅಕಾರಿಗಳ ಹೆಸರನ್ನು ಪ್ರಸ್ತಾಪಿಸಲಾಗಿದ್ದು, ಕೂಡಲೇ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಸಚಿವರು, ಹಿರಿಯ ಅಕಾರಿಗಳ ಒತ್ತಾಯದ ಮೇಲರೆ 187 ಕೋಟಿ ರೂ.ಗಳನ್ನು ಬ್ಯಾಂಕ್ ಮೂಲಕ ವರ್ಗಾವಣೆ ಮಾಡಿರುವುದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಅಕಾರಿ ಸ್ಪಷ್ಟವಾಗಿ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ. ಸಚಿವ ಬಿ.ನಾಗೇಂದ್ರ ಪ್ರಭಾವದಿಂದ ಹಣ ವರ್ಗಾವಣೆಯಾಗಿದೆ.
ಬಿಜೆಪಿ ಸರ್ಕಾರದ ಅವಯಲ್ಲಿ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಆಡಿದ ಮಾತುಗಳಿಗೆ ಬದ್ಧತೆ ಇದ್ದರೆ ಮೊದಲು ನಾಗೇಂದ್ರರನ್ನು ಸಚಿವ ಸಂಪುಟದಿಂದ ಇಷ್ಟೊತ್ತಿಗೆ ವಜಾಗೊಳಿಸಿ, ಅಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಾಗಿತ್ತು.
ಪ್ರಕರಣದ ತನಿಖೆಯನ್ನು ಸಿಐಡಿ, ಎಸ್‌ಐಟಿಗೆ ಒಪ್ಪಿಸುವ ಬದಲು ಸಿಬಿಐಗೆ ಒಪ್ಪಿಸಬೇಕು. ಸಿಐಡಿ, ಎಸ್‌ಐಟಿ ಬಗ್ಗೆ ನಂಬಿಕೆಯಿಲ್ಲ ಎಂದರ್ಥವಲ್ಲ. ಆದರೆ ಸಚಿವರು ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಪ್ರಕರಣವನ್ನು ಮುಚ್ಚಿ ಹಾಕುವ ಸಂಭವ ಹೆಚ್ಚಾಗಿದೆ. ಈ ಕುರಿತು ಪಕ್ಷ ಬೀದಿಗಿಳಿದು ಹೋರಾಟ ನಡೆಸಲಿದೆ.
ಈಶಾನ್ಯ ಪದವೀಧರ ಮತ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಅಮರನಾಥ ಪಾಟೀಲ್ ಸಮರ್ಥ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ವಿಲರಾಗಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.
ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಸಂಸದ ಬಿ.ವಿ.ನಾಯಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಪಾಟೀಲ್, ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net