

ಮೈಸೂರು: ನಗರದ ವಿವಿಧ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಸೆ.15 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಾದವಗೆರೆ, ಮೇಗಳಾಪುರ, ಪುಟ್ಟೇಗೌಡನಹುಂಡಿ, ಚಟ್ಟನಹಳ್ಳಿ, ಚಟ್ಟನಹಳ್ಳಿ ಪಾಳ್ಯ, ಕೀಳನಪುರ, ದುದ್ದಗೆರೆ, ಲಕ್ಷ್ಮೀಪುರ, ಮಹಾದೇವಿ ಕಾಲೋನಿ, ಗುರುಕಾರಪುರ, ಕೊಪ್ಪಲೂರು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಂಜುಮಳಿಗೆ ವೃತ್ತ, ಲಕ್ಷ್ಮೀಪುರಂ, ವಿದ್ಯಾರಣ್ಯಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲಾಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜ ರಸ್ತೆ, ಇಂಡಸ್ಟ್ರಿಯಲ್ ಸಬರ್ಬ್, ವಿಶ್ವೇಶ್ವರಯ್ಯ ನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡೂರಾವ್ ನಗರ, ಕನಕಗಿರಿ, ಅಶೋಕಪುರಂ, ಸರಸ್ವತಿಪುರಂ, ರೈಲ್ವೆ ಕಾರ್ಯಾಗಾರ, ಮಹದೇವಪುರ, ರಮಾಬಾಯಿನಗರ, ಶ್ರೀರಾಂಪುರ, ಜಯನಗರ, ಕೆ.ಜಿ.ಕೊಪ್ಪಲು, ಶಿವಪುರ, ದೇವಲಾಪುರ ಹೋಬಳಿ, ಆದಿಚುಂಚನಗಿರಿ ರಸ್ತೆ, ಜೆ.ಪಿ.ನಗರ, ಶ್ರೀರಾಂಪುರ 2ನೇ ಹಂತ, ರಮಾಬಾಯಿ ನಗರ, ಮಹದೇವಪುರ, ಜಯನಗರ, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ಕೆ ಬ್ಲಾಕ್, ಅಪೋಲೊ ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೇಶಗಳು, ಗೊರೂರು ಗ್ರಾಮ, ಕಳಲವಾಡಿ, ಕೋಟೆಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯ ರಸ್ತೆಯಿಂದ 6ನೇ ಮುಖ್ಯರಸ್ತೆ ಭಾಗಶಃ, ಕೆ.ಜಿ.ಕೊಪ್ಪಲು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.
ಶ್ರೀರಾಂಪುರ 2ನೇ ಹಂತ, ರಮಾಬಾಯಿನಗರ, ಮಹದೇವಪುರ, ಜಯನಗರ 1ರಿಂದ 20ನೇ ಕ್ರಾಸ್, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ಕೆ ಬ್ಲಾಕ್, ಅಪೋಲೊ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳು, ಚಿಕ್ಕಹರದನಹಳ್ಳಿ, ಗೊರೂರು, ಕಳಲವಾಡಿ, ಕೋಟೆಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯರಸ್ತೆ ಯಿಂದ 6ನೇ ಮುಖ್ಯರಸ್ತೆ, ಭಾಗಶಃ, ಕೆ.ಜಿ.ಕೊಪ್ಪಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.