ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ

Published on

ಕೊಟ್ಟೂರು: ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ 115 ಸಾರ್ವಜನಿಕರ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಪಟ್ಟಣದಲ್ಲಿ 40 ಗಣೇಶ ಮೂರ್ತಿಗಳನ್ನು ಕೂಡಿಸಲಾಗಿತ್ತು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ 75ಗಣೇಶ ಮೂರ್ತಿಗಳನ್ನು ಕೂಡಿಸಲಾಗಿತ್ತು. ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗೀತಾಂಜಲಿ ಶಿಂಧೆ ಹಾಗೂ ಸಿಬ್ಬಂದಿ ತಮಟೆ ಹಾಗೂ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಸಿದರು. ಪೊಲೀಸ್ ಸಿಬ್ಬಂದಿ ನೃತ್ಯ ವೈರಲ್ ಆಗಿದ್ದು, 3 ಲಕ್ಷ ಜನ ವೀಕ್ಷಣೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net