

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ನೃತ್ಯೋಪಾಸನಾ ಕಲಾ ಅಕಾಡೆಮಿ ಪುತ್ತೂರು ಇದರ ಸುಬ್ರಹ್ಮಣ್ಯ ಶಾಖೆಯ ವಿದ್ಯಾರ್ಥಿನಿ ವಲ್ಲರಿ ಡಿ.ವಿ.ಭರತನಾಟ್ಯದಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ಶೇ.81ಅಂಕ ಗಳಿಸಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.
ನೃತ್ಯಗುರು ಶಾಲಿನಿ ಆತ್ಮಭೂಷಣ್ ಶಿಷ್ಯೆಯಾದ ಅವರು 2024-25ನೇ ಸಾಲಿನಲ್ಲಿ ವಿ.ವಿ.ನಡೆಸಿದ ಭರತನಾಟ್ಯ ಪರೀಕ್ಷೆ ಬರೆದು ಸಾಧನೆ ಮಾಡಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುರೋಹಿತ ವೆಂಕಟಕೃಷ್ಣಷ್ಣ ಕಲ್ಲೂರಾಯ-ದಿವ್ಯಲಕ್ಷ್ಮಿದಂಪತಿ ಪುತ್ರಿ.