ಸವಾಲುಗಳನ್ನು ಎದುರಿಸಲು ಮಾರ್ಗದರ್ಶನ : ವಕೀಲೆ ಶೋಭಲತಾ ಸುವರ್ಣ ಅನಿಸಿಕೆ

ambrella
ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕೊಡೆ ವಿತರಿಸಲಾಯಿತು.
Published on

ಬಂಟ್ವಾಳ: ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಮನೆ ಮತ್ತು ಶಾಲೆಯ ಮೂಲಕ ಉತ್ತಮ ಸಂಸ್ಕಾರ, ಧೈರ್ಯದಿಂದ ಸವಾಲುಗಳನ್ನು ಎದುರಿಸುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದಾಗ ಅವರು ಭವಿಷ್ಯದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದು ವಕೀಲೆ ಶೋಭಲತಾ ಸುವರ್ಣ ಹೇಳಿದರು.

ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಿಸಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶೈಲಜಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಶುಭ ಹಾರೈಸಿದರು. ದಾನಿ ಸುರೇಶ ಸಾಲ್ಯಾನ್, ಶಿಕ್ಷಕಿಯರಾದ ಭವಾನಿ ಮಹೇಶ್, ಪವಿತ್ರಾ ಸುಜನ್ ಮತ್ತಿತರರು ಇದ್ದರು. ಶಿಕ್ಷಕ ಶ್ರೀಪತಿ ಭಟ್ ಸ್ವಾಗತಿಸಿ, ಮುಖ್ಯಶಿಕ್ಷಕಿ ವಿನಿತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net