ನಿರ್ದಿಷ್ಟ ಗುರಿ, ಆಸಕ್ತಿಯಿಂದ ಯಶಸ್ಸು

id card
ಗೋಳಿಯಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ತಾಕ್ ಅಹಮ್ಮದ್ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದರು.
Published on

ಗೋಳಿಯಂಗಡಿ: ವಿದ್ಯಾರ್ಥಿಗಳು ಯಾವುದೇ ಕೀಳರಿಮೆ ಹೊಂದದೆ ಆತ್ಮಸ್ಥೆರ್ಯ, ನಿರ್ದಿಷ್ಟ ಗುರಿಯೊಂದಿಗೆ ಕಲಿಕೆ ಬಗ್ಗೆ ಹೆಚ್ಚಿನ ಅಸಕ್ತಿ ಹೊಂದಿದಾಗ ಉತ್ತಮ ಅಂಕ ಪಡೆದು ಯಶಸ್ಸು ಗಳಿಸಲು ಸಾಧ್ಯ ಎಂದು ಬೆಳ್ವೆ ಟೀಮ್ ಮಲೆನಾಡು ಹ್ಯೂಮಾನಿಟೇರಿಯನ್ ಟ್ರಸ್ಟ್ ಅಧ್ಯಕ್ಷ ಮುಸ್ತಾಕ್ ಅಹಮ್ಮದ್ ಬೆಳ್ವೆ ಹೇಳಿದರು.

ಗೋಳಿಯಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳ್ವೆ ಟೀಮ್ ಮಲೆನಾಡು ಹ್ಯೂಮಾನಿಟೇರಿಯನ್ ಟ್ರಸ್ಟ್ ಅಧ್ಯಕ್ಷ ಮುಸ್ತಾಕ್ ಅಹಮ್ಮದ್ ಪ್ರಾಯೋಜಕತ್ವದಲ್ಲಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಸಹಭಾಗೀತ್ವದಲ್ಲಿ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದರು.

ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಅಧ್ಯಕ್ಷತೆ ವಹಿಸಿದರು. ಲಯನ್ಸ್ ಕ್ಲಬ್ ವಲಯ ಕಾರ್ಯದರ್ಶಿ ವೈ ಪಟ್ಟಾಭಿರಾಮ್ ಭಟ್ ಮರೂರು, ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ಸದಸ್ಯ ಪತ್ರಕರ್ತ ಕೆ.ಸಂಜೀವ ಆರ್ಡಿ, ಸದಸ್ಯೆ ಭಾರ್ಗವಿ ಪಿ.ಭಟ್ ಗೋಳಿಯಂಗಡಿ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ನಾಗರಾಜ ವೈದ್ಯ ಸ್ವಾಗತಿಸಿದರು. ಅಣ್ಣಯ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಪ್ರಕಾಶ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net