ಸಾಧನೆ ಯಶಸ್ಸಿನ ಮೆಟ್ಟಿಲು

students
Published on

ಶಿರ್ವ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಕಾಣಲು ಆಸಕ್ತ ಚಟುವಟಿಕೆಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲೇ ಸಾಧಕರಾಗಿ ಹೊರಹೊಮ್ಮಿದಾಗ ಜೀವನದಲ್ಲಿ ಯಶಸ್ಸಿನ ಮೆಟ್ಟಿಲು ಏರಲು ಸಾಧ್ಯ ಎಂದು ಶಿರ್ವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಮುಖ್ಯ ಪ್ರಬಂಧಕ ಶ್ರೀನಿವಾಸ ನಾಯಕ್ ಹೇಳಿದರು.

ಶಿರ್ವ ಹಿಂದು ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ 2024-25ನೇ ಶೈಕ್ಷಣಿಕ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಪ್ರಾಂಶುಪಾಲ ಭಾಸ್ಕರ ಎ. ಅಧ್ಯಕ್ಷತೆ ವಹಿಸಿದ್ದರು. ದುರ್ಗಾಸಿರಿ ಬಂಟರ ಸಂಘ ಅಧ್ಯಕ್ಷೆ ಸುನೀತಾ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿ ಸುಂದರ ಮೇರಾ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಸ್ವಾಗತಿಸಿದರು. ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಉಪನ್ಯಾಸಕಿ ಸರಿತಾ ಶೆಟ್ಟಿ ಮತ್ತು ಶಿಕ್ಷಕಿ ವೀಣಾ ವಾಚಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಯಶೋದ ಕಾರ್ಯಕ್ರಮ ನಿರೂಪಿಸಿರು.

2024-25ನೇ ಸಾಲಿನ ಇಬ್ಬರು ವಿದ್ಯಾರ್ಥಿಗಳಿಗೆ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉತ್ತಮ ಸ್ವಯಂ ಸೇವಕರು ಬಹುಮಾನ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net