ಬೇಡಿಕೆಗೆ ಅನುಗುಣ ಬೀಜ, ರಸ ಗೊಬ್ಬರ ವಿತರಿಸಿ

10 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಬೇಕು. ಸರ್ಕಾರದಿಂದ ಕೃಷಿ ಸಂಬ0ಧಿತ ಎಲ್ಲ ಸೌಲಭ್ಯ ಪಡೆಯಲು ರೈತ ಫ್ರುಟ್ ಐಡಿ ಹೊಂದುವುದು ಕಡ್ಡಾಯವಾಗಿದ್ದು, ರೈತರಲ್ಲಿ ಜಾಗೃತಿ ಮೂಡಿಸಲು ಮತ್ತು ಐಡಿ ಹೊಂದಲು ಜಿಲ್ಲೆಯಾದ್ಯಂತ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮುಂಗಾರು ಪೂರ್ವ ಕಾಲದಲ್ಲಿ ಮಳೆ ಉತ್ತಮವಾಗಿದ್ದರಿಂದ ಜಿಲ್ಲೆ ರೈತರು ಬಿತ್ತನೆ ಆರಂಭಿಸಿದ್ದಾರೆ. ಸುಮಾರು ಶೇ. ೩೬ರಷ್ಟು ಬಿತ್ತನೆ ಆಗಿದೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಽಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಶೇ. ೧೦೦ರಷ್ಟು ರೈತರು ಫ್ರುಟ್ ಐಡಿ ಹೊಂದಲು ಅಭಿಯಾನ ಹಮ್ಮಿಕೊಳ್ಳಬೇಕು ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ರೈತರಿಗೆ ಬೀಜ ದರ ಹೆಚ್ಚಳ ಬಗ್ಗೆ ತಿಳಿವಳಿಕೆ ನೀಡಬೇಕು. ಹೊಸ ತಳಿ ಬೀಜಗಳನ್ನು ಪರಿಚಯಿಸಿ, ವಿತರಿಸಲು ಕ್ರಮಕೈಗೊಳ್ಳಬೇಕು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗೆ ರೈತರ ಫ್ರುಟ್ ಐಡಿ ಸೃಜಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜಿಲ್ಲೆಯ ೧೪ ರೈತ ಸಂಪರ್ಕ ಕೇಂದ್ರಗಳ ಜತೆಗೆ ಹೆಚ್ಚುವರಿ ಕೇಂದ್ರಗಳನ್ನು ತೆರೆದು ಸಕಾಲದಲ್ಲಿ ಬೀಜ, ಗೊಬ್ಬರ ವಿತರಿಸಲಾಗುತ್ತಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಽಕಾರಿಗಳ ಮೂಲಕ ಪ್ರತಿ ರೈತರ ಆರ್‌ಟಿಸಿಗೆ ಆಧಾರ್ ಜೋಡಣೆ ಕಾರ್ಯ ನಡೆದಿದೆ ಎಂದರು.
ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಗೋಪಾಲ ಬ್ಯಾಕೋಡ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ, ಉಪನಿರ್ದೇಶಕಿ ಜಯಶ್ರೀ ಹಿರೇಮಠ, ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ. ಭದ್ರಣ್ಣವರ, ರಮೇಶ ಬಿ.ಎಸ್., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಪ್ರಕಾಶ ನಾಶಿ, ವಿವಿಧ ಇಲಾಖೆ ಅಽಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net