ಶಾಲೆಗಳಿಗೆ ಬೆಂಚ್ ವಿತರಿಸುವುದು ಮಹತ್ಕಾರ್ಯ

30sunti01
ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಂಚ್ ಡೆಸ್ಕ್ ವಿತರಿಸಿದ ವೇಳೆ ಜಗದೀಶ್, ಡಿ.ನರಸಿಂಹ, ಸಿ..ಜೆ.ಮಂದಪ್ಪ, ಭೋಜಮ್ಮ, ಪುಷ್ಪಾ, ವಿನೋದಾ, ಕುಸುಮಾ ಇದ್ದರು.
Published on

ಸುಂಟಿಕೊಪ್ಪ: ಶಿಕ್ಷಣವನ್ನು ಉತ್ತೇಜಿಸುವ ದಿಸೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಕ್ಕಳ ಶಿಕ್ಷಣಕ್ಕೆ ಮೂಲ ಸೌಕರ್ಯಗಳಲ್ಲಿ ಒಂದಾದ ಡೆಸ್ಕ್, ಬೆಂಚ್ ವಿತರಿಸುತ್ತಿರುವುದು ಮಹತ್ಕಾರ್ಯ ಎಂದು ಸುಂಟಿಕೊಪ್ಪ ಪೊಲೀಸ್ ಠಾಣಾಕಾರಿ ಜಗದೀಶ್ ಹೇಳಿದರು.

ಬುಧವಾರ ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಂಚ್, ಡೆಸ್ಕ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸಾಮಾಜಿಕವಾಗಿ ಸಮುದಾಯಕ್ಕೆ ಪ್ರೇರಣೆಯಾಗುವಂತಹ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಶಿಕ್ಷಣಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಸರ್ಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಅವರ ಬೇಡಿಕೆ ಅನುಸಾರ ಬೆಂಚ್, ಡೆಸ್ಕ್‌ಗಳನ್ನು ವಿತರಿಸುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಿರುವುದು ಹರ್ಷದಾಯಕ ವಿಚಾರವಾಗಿದೆ ಎಂದು ಹೇಳಿದರು.

ಮಡಿಕೇರಿ ತಾಲೂಕಿನ ವ್ಯಾಪ್ತಿಯಲ್ಲಿ ಸುಮಾರು 19 ಶಾಲೆಗಳು ಬೇಡಿಕೆ ಸಲ್ಲಿಸಿದಷ್ಟು 159 ಬೆಂಚ್, ಡೆಸ್ಕ್ ವಿತರಣೆ ಮಾಡಲಾಗಿದೆ ಎಂದು ಯೋಜನಾಕಾರಿ ಪುರುಷೋತ್ತಮ್ ಪ್ರಾಸ್ತಾವಿಕವಾಗಿ ನುಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಡಿ.ನರಸಿಂಹ, ಶ್ರೀಮತಿ ಚೆನ್ನಮ್ಮ ಕಾಲೇಜು ಪ್ರಾಂಶುಪಾಲ ಸಿ.ಜೆ.ಮಂದಪ್ಪ, ಗ್ರಾ.ಪಂ. ಅಧ್ಯಕ್ಷೆ ಭೋಜಮ್ಮ, ಒಕ್ಕೂಟದ ಅಧ್ಯಕ್ಷೆ ಪುಷ್ಪಾ, ಮೇಲ್ವಿಚಾರಕಿ ವಿನೋದಾ, ಸೇವಾ ಪ್ರತಿನಿ ಕುಸುಮಾ ಹಾಗೂ ಪದಾಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net