ಸ್ವಾರ್ಥರಹಿತವಾಗಿ ಸಮಾಜಮುಖಿ ಕಾರ್ಯ : ಕೋಟ ಶ್ರೀನಿವಾಸ ಪೂಜಾರಿ ಆಶಯ ಅಭಿನಂದನೆ, ಸಹಾಯಧನ ವಿತರಣೆ

billava
ವಿದ್ಯಾರ್ಥಿ ಸಹಾಯಧನ ವಿತರಣೆ ಮತ್ತು ವಿಶೇಷ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೌರವಿಸಲಾಯಿತು
Published on

ಗಂಗೊಳ್ಳಿ: ಶಿಕ್ಷಣ, ಆರೋಗ್ಯ, ಬದುಕು, ಸ್ಥೈರ್ಯ ನೀಡಲು ಜಾತಿ ಸಂಘಗಳು ಬಳಕೆಯಾಗಬೇಕು. ಸ್ವಾರ್ಥರಹಿತವಾಗಿ ಸಮಾಜದ ಕೆಲಸದಲ್ಲಿ ತೊಡಗಿಸಿಕೊಂಡಾಗ ಸಿಗುವ ಸಂತೋಷವೆ ಬೇರೆ. ಸರ್ಕಾರ ಮಾಡಲಾಗದ ಕೆಲಸ ಸಮಾಜದ ಸಂಘಟನೆ ಮಾಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶ್ರೀ ನಾರಾಯಣಗುರು ಸಭಾಭವನದಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ, ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ದತ್ತಿ ಸಂಸ್ಥೆ ಕುಂದಾಪುರ ಆಶ್ರಯದಲ್ಲಿ 32ನೇ ವರ್ಷದ ವಿದ್ಯಾರ್ಥಿ ಸಹಾಯಧನ ವಿತರಣೆ ಮತ್ತು ವಿಶೇಷ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಂಘ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ಸಿಗಂದೂರಿನ ಕಾರ್ಯದರ್ಶಿ ರವಿ ಕುಮಾರ್ ಎಚ್.ಆರ್. ಕಾರ್ಯಕ್ರಮ ಉದ್ಘಾಟಿಸಿದರು.

ಸಿದ್ದಾರ್ಥ ಎಸ್.ಪೂಜಾರಿ, ಗೋವಾ ಉದ್ಯಮಿ ಸತೀಶ್ ಪೂಜಾರಿ ಮರವಂತೆ, ಕೃಷಿಕ ನಾರಾಯಣ ಪೂಜಾರಿ ಹಳ್ಳಿಬಲು ಹಳ್ಳಿಹೊಳೆ, ಬಿಲ್ಲವ ಸಮಾಜ ಸೇವಾ ಸಂಘ ಉಪಾಧ್ಯಕ್ಷರಾದ ರಾಮ ಪೂಜಾರಿ ಮುಲ್ಲಿಮನೆ, ಶಿವರಾಮ ಪೂಜಾರಿ ಬಸ್ರೂರು, ನಾರಾಯಣ ಗುರು ಯುವಕ ಮಂಡಲ ಅಧ್ಯಕ್ಷ ಸಂದೇಶ್ ಪೂಜಾರಿ ಬೀಜಾಡಿ, ಬಿಲ್ಲವ ಮಹಿಳಾ ಘಟಕ ಅಧ್ಯಕ್ಷೆ ಗಿರಿಜಾ ಮಾಣಿಗೋಪಾಲ್, ಬಿಲ್ಲವ ಸಮಾಜ ಸೇವಾ ಸಂಘ ಪ್ರಧಾನ ಕೋಶಾಧಿಕಾರಿ ರಮೇಶ್ ಪೂಜಾರಿ ಮೇಲ್‌ಹಿತ್ಲು ಉಪಸ್ಥಿತರಿದ್ದರು. ಬಿಲ್ಲವ ಸಮಾಜ ಸೇವಾ ಸಂಘ ಪ್ರಧಾನ ಕಾರ್ಯದರ್ಶಿ ಗಣೇಶ್ ಪೂಜಾರಿ ವಿಠಲವಾಡಿ ಸ್ವಾಗತಿಸಿ, ಶಿಕ್ಷಕ ಸತೀಶ್ ವಡ್ಡರ್ಸೆ ನಿರ್ವಹಿಸಿದರು.

ಸನ್ಮಾನ, ಗೌರವಾರ್ಪಣೆ

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್, ರಾಜ್ಯ ಶ್ರೇಷ್ಠ ವೈದ್ಯ ಪ್ರಶಸ್ತಿ ಪುರಸ್ಕೃತ ನಾಡ ಪಿಎಚ್‌ಸಿ ವೈದ್ಯಾಧಿಕಾರಿ ಡಾ.ಚಿಕ್ಮರಿ, ಸಿಎ ದೇವ್‌ಆನಂದ್, ಕೃಷಿಕ ನಾರಾಯಣ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net