ಸರ್ಕಾರಿ ಶಾಲೆ ಮಕ್ಕಳಿಗೆ ಬ್ಯಾಗ್ ವಿತರಣೆ

ph,02, ಉಚಿತ ಬ್ಯಾಗ್ ಹಾಗೂ ಪರಿಕರ ವಿತರಣೆ
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಅರಕೆರೆ, ಕೋಳಗುಂದ, ಗೊಲ್ಲರಹಟ್ಟಿ, ಬಾಣಾವರ, ಉಂಡಿಗನಾಳು ಹಲವು ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಬಜಾಜ್ ರಾಮಜೀವನ್ ಚಾರಿಟಬಲ್ ಟ್ರಸ್ಟ್ ಹಾಗೂ ಬೆಂಗಳೂರಿನ ಮಾರ್ವಾಡಿ ಯುವ ಮಂಚ್ ವತಿಯಿಂದ ಸೋಮವಾರ ಬ್ಯಾಗ್ ಅನ್ನು ಉಚಿತವಾಗಿ ವಿತರಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಮಾತನಾಡಿ, ಸರ್ಕಾರ ಮತ್ತು ಖಾಸಗಿಯವರು ನೀಡುತ್ತಿರುವ ಸೌಲಭ್ಯಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಂಡು ಚೆನ್ನಾಗಿ ಓದಿ ಶಾಲೆಗೆ ಕೀರ್ತಿ ತರಬೇಕು ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಶಂಕರ್ ಮಾತನಾಡಿ, ಪಾಲಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಶಾಲೆಯೊಂದಿಗೆ ನಿಕಟಪೂರ್ವ ಸಂಬಂಧ ಹೊಂದುವ ಮೂಲಕ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕ ಪಿ.ಪಿ.ರೇಣುಕಾರಾಧ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net