ಶಿಕ್ಷಣಕ್ಕೆ ಪ್ರೋತ್ಸಾಹ ಇತರರಿಗೆ ಮಾದರಿ : ಶಾಸಕ ಹರೀಶ್ ಪೂಂಜ ಮೆಚ್ಚುಗೆ

New Project (11)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿರುವುದು ಇತರರಿಗೆ ಮಾದರಿ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಕುತ್ಯಾರು ಹೊಸಮನೆ ಕ್ರೀಡಾಂಗಣದಲ್ಲಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ 13ನೇ ವರ್ಷದ ಪದಾರ್ಪಣೆ ಪ್ರಯುಕ್ತ ಮುಡಿಪು ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಆಶ್ರಯದಲ್ಲಿ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ, ಉತ್ತಮ ಅಂಕ ಪಡೆದ ಮಕ್ಕಳಿಗೆ ಸನ್ಮಾನ ಹಾಗೂ ಸಮಾಜ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯನಿರತ ಪತ್ರಕರ್ತರ ಸಂ ಬೆಳ್ತಂಗಡಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ, ವಿಜಯವಾಣಿ ವರದಿಗಾರ ಮನೋಹರ ಬಳಂಜ, ಉದ್ಯಮಿ ಕರುಣಾಕರ ಬಂಗೇರ, ಸಂಜೀವ ಮೂಲ್ಯ, ಸಂತೋಷ್ ಕೊಲ್ಯ, ವಿನೋದ್ ಪೂಜಾರಿ ಉಪಸ್ಥಿತರಿದ್ದರು. ವಿಜಯ ಕಂಗಿತ್ತಿಲ್ ಸ್ವಾಗತಿಸಿದರು. ದೀಕ್ಷಿತ್ ಗಾಣಿಗ ನಿರೂಪಿಸಿದರು. ಸಂದೀಪ್ ಬೆಳ್ತಂಗಡಿ ವಂದಿಸಿದರು.

ಸಮಾಜ ರತ್ನ ಪ್ರಶಸ್ತಿ ಪ್ರದಾನ

ಸಾಧನೆಗೈದ ಸಾಧಕರನ್ನು ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. 140 ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ನೀಡಲಾಯಿತು. ಸಾನಿಧ್ಯ ಸಮೂಹ ಸಂಸ್ಥೆಯ ಆಡಳಿತ ಅಧಿಕಾರಿ ವಸಂತ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಜ್ಞಾನ ಮಂದಾರ ಶೈಕ್ಷಣಿಕ ಸಾಂಸ್ಕೃತಿಕ ಸೇವಾ ಟ್ರಸ್ಟ್ ಬೆಂಗಳೂರು ಸಂಸ್ಥಾಪಕ ಎಚ್.ಸೋಮಶೇಖರ್ ಪುಸ್ತಕ ವಿತರಿಸಿ, ದೀಪಕ್ ಜಿ. ಅವರನ್ನು ಸಂಸ್ಥೆಯ ಪರವಾಗಿ ಗೌರವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net