

ಗೋಳಿಯಂಗಡಿ: ಉದ್ಯಮಿ ಪ್ರವೀಣ್ ಶೆಟ್ಟಿ ವಂಡಾರು ನೇತೃತ್ವದ ನಿತ್ಯ ನಿರಂತರ ಸೇವಾ ಟ್ರಸ್ಟ್ ಮೂಲಕ ಆವರ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಸ್ಕೂಲ್ ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಂ, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುಜಂಗ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನದಾಸ ಶೆಟ್ಟಿ, ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುನೀಲ್ ಶೆಟ್ಟಿ, ಮುಖ್ಯ ಶಿಕ್ಷಕ ರಮೇಶ್ ಕುಲಾಲ್ ಅಮಾಸೆಬೈಲು, ಶಿಕ್ಷಕ ವೃಂದವರು ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಶಿಕಲಾ ಎನ್.ಸ್ವಾಗತಿಸಿದರು. ಎಚ್.ಪ್ರವೀಣ ಶೆಟ್ಟಿ ವಂದಿಸಿದರು. ಶಿಕ್ಷಕ ಶ್ರೀನಿವಾಸ ಭಟ್ ಕಾರ್ಯಕ್ರಮ ನಿರೂಪಿಸಿದರು.