ಬಸ್‌ಪಾಸ್‌ಗಾಗಿ ಅರ್ಜಿ ಸಲ್ಲಿಸಿ: ನಿಗಧಿತ ಕೌಂಟರ್‌ನಲ್ಲಿ ಪಾಸ್ ಪಡೆದುಕೊಳ್ಳಿ

ksrtc_fare
ಕೆಎಸ್‌ಆರ್‌ಟಿಸಿ ಬಸ್
Published on

ಮಂಡ್ಯ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಿಗಮದ ಬಸ್‌ಪಾಸ್ ಪಡೆಯಲು ವಿದ್ಯಾರ್ಥಿಗಳು ವೆಬ್‌ಸೈಟ್  URL-https://sevasindhuservices.karnataka.gov.in/buspassservices/ ಅರ್ಜಿ ಸಲ್ಲಿಸಬಹುದು.

ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್‌ಪಾಸ್ ವಿತರಿಸಲಾಗುತ್ತಿದೆ. ಆದ್ದರಿಂದ ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಆದೇಶದಂತೆ 30 ರೂ ಮಾತ್ರ ಸೇವಾ ಶುಲ್ಕ ನೀಡಬೇಕು. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಸಂದೇಶ ಬರುತ್ತದೆ. ಜೂ.1ರಿಂದ ನಿಗಧಿತ ಕೆ-1 ಪಾಸ್ ಕೌಂಟರ್‌ಗಳಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net