

ಹನೂರು: ತಾಲೂಕು ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ 2025-2029ರ ಅವಧಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಮಾ.2 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚನ್ನಾಲಿಂಗಹಳ್ಳಿ ಸರ್ಕಾರಿ ಪ್ರೌಢಶಾಲೆಯ ಸಿ. ಕೆಂಪರಾಜು, ಉಪಾಧ್ಯಕ್ಷರಾಗಿ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆಯ ಪಿ. ರಾಚಪ್ಪ, ಕಾರ್ಯದರ್ಶಿಯಾಗಿ ಮಂಗಲ ಸರ್ಕಾರಿ ಪ್ರೌಢಶಾಲೆಯ ಆರ್. ಶಂಭಯ್ಯ, ಸಹ ಕಾರ್ಯದರ್ಶಿಯಾಗಿ ರಾಮಾಪುರ ಸರ್ಕಾರಿ ಪ್ರೌಢಶಾಲೆಯ ಎಸ್. ಕುಮಾರನಾಯ್ಕ, ಖಜಾಂಚಿಯಾಗಿ ಕೌದಳ್ಳಿ ಸರ್ಕಾರಿ ಪ್ರೌಢಶಾಲೆಯ ಅಬ್ದುಲ್ ಜಮೀರ್, ಹಾಗೂ ಜಂಟಿ ಕಾರ್ಯದರ್ಶಿಯಾಗಿ ಎಲ್ಲೇಮಾಳ ಸರ್ಕಾರಿ ಪ್ರೌಢಶಾಲೆಯ ಆರ್. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರಿಗೆ ಅರ್ಹತಾ ಪತ್ರವನ್ನು ವಿತರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಸಗುರುಲಿಂಗಯ್ಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ, ಶಿಕ್ಷಣ ಸಂಯೋಜಕರಾದ ಅಶೋಕ್, ಚಂದ್ರಶೇಖರ್, ಚಿನ್ನಪ್ಪಯ್ಯ ಇತರರು ಇದ್ದರು.