

ಆಲೂರು: ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಐವರು ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಚೆಕ್ ನೀಡಿ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಶಾಂತಕೃಷ್ಣ ಮಾತನಾಡಿ, ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದು, ಅವರ ಸೇವೆ ನಿರಂತರವಾಗಿರಬೇಕು ಎಂದರು.
ಸಂಘದ ಉಪಾಧ್ಯಕ್ಷ ಶಿವಣ್ಣ ಮಾತನಾಡಿ, ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಸಂಬಳ ಕುಟುಂಬ ನಿರ್ವಹಣೆಗೆ ಸಾಲುತ್ತಿಲ್ಲ. ಅವರ ಸೇವೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುರುತಿಸಿ ಹನ್ನೆರಡು ಸಾವಿರ ರೂ. ವೇತನ ನೀಡಬೇಕು. ಜತೆಗೆ ಗುಣಮಟ್ಟದ ಪಿಪಿಇ ಕಿಟ್ ನೀಡಬೇಕು ಎಂದರು.
ಸಂಘದ ನಿರ್ದೇಶಕರಾದ ತೌಫಿಕ್ ಅಹಮದ್, ಸಂದೇಶ್, ರಘುಕುಮಾರ್, ಮಧು, ಮಲ್ಲೇಶ್, ಕಾಂತರಾಜು, ಪುಟ್ಟರಾಜಗೌಡ, ಹಾಗೂ ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.