ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನಿತ್ಯ ಬಳಕೆ ವಸ್ತುಗಳ ವಿತರಣೆ

kit vitarane
ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಸೋಪ್‌ಕಿಟ್, ಬೆಡ್‌ಶೀಟ್ ಮತ್ತಿತತರ ದಿನೋಪಯೋಗಿ ವಸ್ತುಗಳನ್ನು ವಿತರಿಸಲಾಯಿತು.
Published on

ಕುಂದಾಪುರ: ಹಾಸ್ಟೆಲ್‌ಗಳಲ್ಲಿ ಊಟ ವಸತಿ ಜತೆಗೆ ಇನ್ನಷ್ಟು ವಸ್ತುಗಳನ್ನು ನೀಡಲಾಗುತ್ತಿದ್ದು ಹಾಸ್ಟೆಲ್ ಸೌಲಭ್ಯ ಚೆನ್ನಾಗಿದೆ. ತೊಂದರೆ ಇದ್ದಲ್ಲಿ ಗಮನಕ್ಕೆ ತನ್ನಿ. ಸರ್ಕಾರ ವಿದ್ಯಾರ್ಥಿಗಳ ಮೇಲೆ ಮಾಡುತ್ತಿರುವ ಖರ್ಚು ಗಮನಿಸಿ ವಿದ್ಯಾರ್ಥಿಗಳು ಆಸಕ್ತಿಯಿಂದ ಓದಿ ಸಾಧನೆ ಮಾಡಬೇಕು ಎಂದು ಶಾಸಕ ಕಿರಣ್‌ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಸೋಪ್‌ಕಿಟ್, ಬೆಡ್‌ಶೀಟ್, ಬೆಡ್ ಸ್ಪ್ರೆಡ್, ಜಮಖಾನೆ, ಲೇಖನ ಸಾಮಗ್ರಿ, ರಾತ್ರಿ ಧರಿಸುವ ಬಟ್ಟೆ, ಸಿಬ್ಬಂದಿಗೆ ಏಪ್ರಾನ್ ವಿತರಿಸಿ ಸೋಮವಾರ ಮಾತನಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ತಾಪಂ ಇಒ ಡಾ.ರವಿ ಕುಮಾರ್ ಹುಕ್ಕೇರಿ, ಬೈಂದೂರು ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ರಾಜ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್ ಕೆ., ಗೃಹಮಂಡಳಿ ಕಾರ್ಯನಿರ್ವಾಹಕ ಎಂಜಿನಿಯರ್ ಸಹನಾ, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸತ್ಯನಾರಾಯಣ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲ್ವಿಚಾರಕ ಶೇಖರ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಆಶಾದೇವಿ ನಾಯ್ಕ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net