

ಮೈಸೂರು: ಕುರುಬಗೇರಿ ಅರಳಿಕಟ್ಟೆ ಗಣಪತಿ ದೇವಸ್ಥಾನದ ಮುಂಭಾಗ ಗೌರಿ-ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಮಣ್ಣಿನ ಗೌರಿ-ಗಣೇಶ ಮೂರ್ತಿ ನೀಡುವ ಮೂಲಕ ಶಾಸಕ ಕೆ.ಹರೀಶ್‌ಗೌಡ ಶುಭ ಕೋರಿದರು.
ಹಿಂದು ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾದ ಗೌರಿ-ಗಣೇಶನ ಹಬ್ಬವು ಸಾಮರಸ್ಯದ ಸಂಕೇತವಾಗಿದ್ದು, ಈ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ಒಳ್ಳೆಯ ಕೆಲಸ ಪ್ರಾರಂಭಿಸುವ ಮೊದಲು ವಿಘ್ನ ನಿವಾರಕ ಗಣೇಶನ ಪೂಜಿಸುವುದು ಪದ್ಧತಿ. ಇಂತಹ ಪವಿತ್ರ ಪೂಜಾ ಸ್ಥಾನ ಪಡೆದುಕೊಂಡಿರುವ ಗಣಪತಿಯನ್ನು ಪ್ರತಿಷ್ಠಾಪಿಸಿ ದೇಶದ ಆಚಾರ-ವಿಚಾರ, ಸಂಸ್ಕೃತಿ ಮುಂದುವರಿಸುತ್ತಿರುವುದು ಸಂತಸ ತಂದಿದೆ ಎಂದರು.
ಗಣೇಶ ಹಬ್ಬದಂದು ಪರಿಸರ ಮಾಲಿನ್ಯ ತಡೆಯುವ ದಿಸೆಯಲ್ಲಿ ಬಣ್ಣ ರಹಿತ ನೈಸರ್ಗಿಕವಾಗಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ವಿಗ್ರಹ ಪ್ರತಿಷ್ಠಾಪಿಸಬೇಕು. ಹಸಿರೆಡೆಗೆ ನಮ್ಮ ನಡೆ- ಹಸಿರು ಯಾತ್ರೆ ಅಭಿಯಾನದಡಿ ಪರಿಸರ ಸ್ನೇಹಿ ಹಸಿರು ಗಣೇಶ ಜಾಗೃತಿ ನಡೆಯಲಿ ಎಂದು ಹೇಳಿದರು
ಮೈಸೂರು ಯುವ ಬಳಗದ ಅಧ್ಯಕ್ಷ ನವೀನ್, ದೇವರಾಜ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರಾಯಪ್ಪ, ಇಂದಿರಾಗಾಂಧಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು, ಮುಖಂಡರಾದ ರವಿಚಂದ್ರ, ಸಂದೀಪ್, ಮಾದೇವ, ಮಂಗಳಾ ಶಾಂತಿ, ಮಂಜುಳಾ, ಜಗದೀಶ್‌ಹೇಮಂತ್, ರಾಹುಲ್ ಇತರರು ಇದ್ದರು.