

ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ೬ ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕಿಟ್‌ಗಳನ್ನು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ವಿತರಿಸಿದರು.
೯ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶ್ರಮಿಕ್ ಟ್ಯಾಬ್, ಪೇಂಟರ್‌ಗೆ ಪೇಂಟಿಂಗ್ ಟೂಲ್ ಕಿಟ್, ಕಾಪೇರ್ಂಟರಗೆ ಕಾಪೇರ್ಂಟರ್ ಟೂಲ್ ಕಿಟ್, ಪ್ಲಂಬರ್‌ಗೆ ಪ್ಲಂಬಿಂಗ್ ಟೂಲ್ ಕಿಟ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ, ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.