

ರೋಣ: ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಸದೃಢವಾಗಲಿದ್ದು, ಮಕ್ಕಳ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣುಗಳನ್ನು ವಿತರಿಸುತ್ತಿದೆ ಎಂದು ಪುರಸಭೆ ಉಪಾಧ್ಯಕ್ಷ ಮಿಥುನ ಪಾಟೀಲ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಿಸಿ ಅವರು ಮಾತನಾಡಿ, ಸರ್ಕಾರಿ ಶಾಲೆಗೆ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಬರುವುದು ಹೆಚ್ಚು. ಆ ಮಕ್ಕಳು ಆರೋಗ್ಯ ಸಮಸ್ಯೆಯಿಂದ ಬಳಲಬಾರದು ಎಂದು ಮಹತ್ವ ಪೂರ್ಣ ಯೋಜನೆಗೆ ಚಾಲನೆ ನೀಡಲಾಗಿದೆ. ಮಕ್ಕಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.