ಭದ್ರತಾ ಸಿಬ್ಬಂದಿಗೆ ಆಹಾರ ಕಿಟ್ ವಿತರಣೆ

11 HANUR 2
ಮಲೆಮಹದೇಶ್ವರ ಬೆಟ್ಟದಲ್ಲಿ ಭದ್ರತಾ ಸಿಬ್ಬಂದಿಗೆ ಮಾಜಿ ಸಚಿವ ವಿ.ಸೋಮಣ್ಣ ಅವರ ಪತ್ನಿ ಶೈಲಜಾ ಆಹಾರ ಪದಾರ್ಥದ ಕಿಟ್ ವಿತರಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಭದ್ರತಾ ಸಿಬ್ಬಂದಿ ಇದ್ದರು.
Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ 100 ಭದ್ರತಾ ಸಿಬ್ಬಂದಿಗೆ ಗುರುವಾರ ಮಾಜಿ ಸಚಿವ ವಿ. ಸೋಮಣ್ಣ ಅವರ ಪತ್ನಿ ಶೈಲಜಾ ಆಹಾರ ಪದಾರ್ಥಗಳ ಕಿಟ್ ವಿತರಿಸಿದರು.

ಎಳ್ಳುಅಮಾವಾಸ್ಯೆ ಹಿನ್ನೆಲೆ ಮ.ಬೆಟ್ಟಕ್ಕೆ ಭೇಟಿ ನೀಡಿದ ಅವರು ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ದೇಗುಲದ ಕಚೇರಿಯಲ್ಲಿ ಸಿಬ್ಬಂದಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸಿದರು. ಇದರಲ್ಲಿ ಮಹಿಳಾ ಸಿಬ್ಬಂದಿಗೆ ಸೀರೆ ನೀಡಿದರು.

ಮ.ಬೆಟ್ಟ ಧಾರ್ಮಿಕ ಪುಣ್ಯ ಕ್ಷೇತ್ರ. ಇಲ್ಲಿಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ದಿಸೆಯಲ್ಲಿ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಜತೆಗೆ ಪುಣ್ಯದ ಕೆಲಸ. ಇದೇ ರೀತಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುವುದರ ಮೂಲಕ ಆಗಮಿಸುವ ಭಕ್ತರಿಗೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಈ ದಿಸೆಯಲ್ಲಿ ನನ್ನ ಕೈಲಾಸ ಸಹಾಯ ನೀಡುತ್ತಿದ್ದೇನೆ ಎಂದು ಶೈಲಜಾ ಹೇಳಿದರು.

ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net