

ಮಂಡ್ಯ : ಶಾಸಕ ಕದಲೂರು ಉದಯ್ ಅವರ ಹುಟ್ಟುಹಬ್ಬದ ಅಂಗವಾಗಿ ಕೆ.ಎಂ.ದೊಡ್ಡಿಯ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಜಿ.ಪಂ ಮಾಜಿ ಸದಸ್ಯ ಎ.ಎಸ್.ರಾಜೀವ್ ಮಾತನಾಡಿ, ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಕಲ್ಪನೆ ಹೊಂದಿ ಜನಸಾಮಾನ್ಯರ ಕಷ್ಟ, ಸುಖಗಳಿಗೆ ಸದಾ ಸ್ಪಂದಿಸುತ್ತಿರುವ ಶಾಸಕ ಕದಲೂರು ಉದಯ್ ರಾಜಕೀಯ ರಂಗದಲ್ಲಿ ಇನ್ನು ಉತ್ತುಂಗಕ್ಕೆ ಬೆಳೆಯಲಿ ಎಂದು ಆಶಯ ವ್ಯಕ್ತಪಡಿಸಿದರು.
ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆ ಮಾಡುವ ಮೂಲಕ ಮದ್ದೂರು ಕ್ಷೇತ್ರಕ್ಕೆ ಆಗಮಿಸಿದ ಕದಲೂರು ಉದಯ್ ಅವರನ್ನು ಜನರು ಅಭಿಮಾನದಿಂದ ಶಾಸಕರಾಗಿ ಆಯ್ಕೆ ಮಾಡುವ ಮೂಲಕ ಜನಸೇವೆಗೆ ಅವಕಾಶ ಮಾಡಿ ಕೊಟ್ಟಿದ್ದು ಅವರ ಸಾಮಾಜಿಕ ಕಳಕಳಿಯು ಇದೇ ರೀತಿ ಮುಂದುವರಿಯಲಿ ಎಂದರು.
ಇದಕ್ಕೂ ಮೊದಲು ಇಲ್ಲಿ ಚಾಂಶುಗರ್ಸ್ ಕಾರ್ಖಾನೆ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಶಾಸಕ ಕದಲೂರು ಉದಯ್ ಅವರ ಹುಟ್ಟುಹಬ್ಬದ ಅಂಗವಾಗಿ ವಿಶೆೇಷ ಪೂಜೆ ನೆರವೇರಿಸಲಾಯಿತು.
ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೇವರಹಳ್ಳಿ ದೊಡ್ಡೇಗೌಡ, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಎಂ.ಪಿ.ರವಿಚಂದ್ರ, ವಕ್ರತುಂಡ ವೆಂಕಟೇಶ್, ಅಣ್ಣೂರು ವರದರಾಜು, ಸದಸ್ಯರಾದ ಕೆ.ಟಿ.ಶ್ರೀನಿವಾಸ್, ಪುಟ್ಟರಾಮು, ಕೆ.ವಿ.ಶ್ರೀನಿವಾಸ್, ತೊರೆಬೊಮ್ಮನಹಳ್ಳಿ ಸಿದ್ದರಾಮೇಗೌಡ, ಚನ್ನಶೆಟ್ಟಿ, ಅಣ್ಣೂರು ಮನೋಹರ್, ಕರಡಕೆರೆ ಮನು, ಯಾಲಾದಹಳ್ಳಿ ಬೋರೇಗೌಡ ಸೇರಿದಂತೆ ಇತರರು ಇದ್ದರು.