

ಕೊಳ್ಳೇಗಾಲ: ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವರ 109ನೇ ಜಯಂತಿ ಅಂಗವಾಗಿ ಶುಕ್ರವಾರ ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಒಳರೋಗಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ಭಕ್ತವೃಂದ ಹಣ್ಣು-ಹಂಪಲು ವಿತರಣೆ ಮಾಡಿದರು.
ಈ ವೇಳೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವರು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸಮಾಜಮುಖಿ ಕೆಲಸ ಮಾಡಿದ್ದಾರೆ. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದನ್ನು ಸಮಾಜಕ್ಕೆ ಕಲಿಸಿದ್ದಾರೆ. ಮಠದ ಮೂಲಕ ಬಡ ಮಕ್ಕಳಿಗೆ ವಿದ್ಯೆ ಹಾಗೂ ದಾಸೋಹ ನೀಡಿದ್ದಾರೆ ಎಂದರು.
ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಡಿಎಚ್‌ಒ ಚಿದಂಬರಂ, ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಬಸವರಾಜು, ಮಾನಸ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ದತ್ತೇಶ್‌ಕುಮಾರ್, ಯುವ ಉದ್ಯಮಿ ನಿಶಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ವೀರಭದ್ರಸ್ವಾಮಿ, ಅ.ಭಾ.ವೀ. ಲಿಂ. ಮಹಾಸಭೆ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ತಾಲೂಕು ಅಧ್ಯಕ್ಷ ತಿಮ್ಮರಾಜೀಪುರ ಪುಟ್ಟಣ್ಣ, ಉಪಾಧ್ಯಕ್ಷ ತಿಮ್ಮರಾಜೀಪುರ ರಾಜು, ಪ್ರಧಾನ ಕಾರ್ಯದರ್ಶಿ ಕೆಂಪನಪಾಳ್ಯ ಮಹೇಶ್, ನಿರ್ದೇಶಕ ಎನ್.ಮಂಜುನಾಥ್ ಸೇರಿದಂತೆ ಇತರರು ಇದ್ದರು.