ಪೌರಕಾರ್ಮಿಕರಿಗೆ ಹಣ್ಣು ಹಂಪಲು ವಿತರಣೆ

ಪೌರಕಾರ್ಮಿಕರಿಗೆ ಹಣ್ಣು ಹಂಪಲು ವಿತರಣೆ
Published on

ಸೋಮವಾರಪೇಟೆ: ಶ್ರೀ ಶಿವಕುಮಾರ ಸ್ವಾಮೀಜಿ ಜಯಂತ್ಯುತ್ಸವ ಸಮಿತಿ ವತಿಯಿಂದ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಸೋಮವಾರ ಹಣ್ಣು ಹಂಪಲು ವಿತರಿಸಲಾಯಿತು.

ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಸ್. ಮಹೇಶ್ ಮಾತನಾಡಿ, ನಡೆದಾಡುವ ದೇವರೆಂದೇ ಹೆಸರಾಗಿದ್ದ ಶಿವಕುಮಾರ ಸ್ವಾಮೀಜಿ ಅವರು ತ್ರಿವಿಧ ದಾಸೋಹಗಳ ಮೂಲಕ ಸಮಾಜದಲ್ಲಿ ಪೂಜ್ಯ ಸ್ಥಾನ ಅಲಂಕರಿಸಿದವರು. ಅವರ ಆದರ್ಶಗಳ ಪಾಲನೆಯೊಂದಿಗೆ ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾ ನಾಯಕ್, ಆರೋಗ್ಯ ನಿರೀಕ್ಷಕ ಜಾಸಿಂ ಖಾನ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಉಷಾರಾಣಿ, ಪ್ರಮುಖರಾದ ಸುಲೈಮಾನ್, ರಂಗಸ್ವಾಮಿ, ಡ್ಯಾನಿಯಲ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net