ದೃಷ್ಟಿದೋಷ ಉಳ್ಳವರಿಗೆ ಕನ್ನಡಕ ವಿತರಣೆ

Kannadaka
Published on

ಮುಂಡಗೋಡ: ಕಣ್ಣು ಕಾಣದವರಿಗೆ ಸರ್ಕಾರವು ಆಶಾ ಕಿರಣ ಯೋಜನೆಯಡಿ ಉಚಿತವಾಗಿ ಕನ್ನಡಕಗಳನ್ನು ವಿತರಿಸುತ್ತಿರುವುದು ಉತ್ತಮ ಕಾರ್ಯ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯ ಸಭಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡಕ ವಿತರಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಕಣ್ಣುಗಳು ಅತಿ ಮುಖ್ಯವಾಗಿವೆ. ವಯಸ್ಸಾದಂತೆ ದೃಷ್ಟಿಹೀನತೆ ಎದುರಾಗುತ್ತದೆ. ಆದ್ದರಿಂದ ಸರ್ಕಾರ ಬಡ ಜನತೆಯ ಅನುಕೂಲಕ್ಕಾಗಿ ಈ ಯೋಜನೆ ಜಾರಿಗೆ ತಂದಿದೆ. ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿ ದೃಷ್ಟಿ ತೊಂದರೆ ಇರುವವರನ್ನು ಗುರುತಿಸಿ ಕನ್ನಡಕ ವಿತರಣೆ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಯ ಪ್ರಯೋಜನಪಡೆದುಕೊಳ್ಳಬೇಕು ಎಂದರು.

ತಾಪಂ ಅಧಿಕಾರಿ ಟಿ.ವೈ. ದಾಸನಕೊಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಸುಧಾ ಭೋವಿ, ಉಪಾಧ್ಯಕ್ಷೆ ರಹಿಮಾ ಬಾನು ಕುಂಕೂರ, ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ನರೇಂದ್ರ ಪವಾರ, ಡಾ. ಸ್ವರೂಪಾರಾಣಿ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯರು, ಆಸ್ಪತ್ರೆಯ ವೈದ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net