

ಗೋಣಿಕೊಪ್ಪ: ಯರವ ಸಮಾಜ ವತಿಯಿಂದ ತಿತಿಮತಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕ್ರೀಡಾ ಜರ್ಸಿಗಳನ್ನು ವಿತರಿಸಲಾಯಿತು.
ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯರವ ಸಮಾಜದ ಅಧ್ಯಕ್ಷ ಸಿದ್ದಪ್ಪ ಸೋಮವಾರ ಶಾಲೆಯ ಒಟ್ಟು 15 ಕ್ರೀಡಾಪಟುಗಳಿಗೆ ಜರ್ಸಿ ವಿತರಿಸಿದರು.
ನಂತರ ಮಾತನಾಡಿದ ಸಿದ್ದಪ್ಪ, ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ಅವಕಾಶದ ಕೊರತೆಯಿಂದ ಬೆಳಕಿಗೆ ಬರಲು ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡ ಯರವ ಸಮಾಜ, ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಗಳನ್ನು ಗುರುತಿಸಿ ಅಲ್ಲಿನ ಕ್ರೀಡಾಪಟುಗಳನ್ನು ಉತ್ತೇಜಿಸಲು ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯರವ ಸಮಾಜದ ಉಪಾಧ್ಯಕ್ಷ ಪಿ.ಎಂ.ರಘು, ಸಮಿತಿ ಸದಸ್ಯರಾದ ಶಶಿ, ತಿತಿಮತಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕರಾದ ಸಿ.ಎಂ. ರಾಘವೇಂದ್ರ, ನವೀನ್ ಬಾಸಿತ್ ಇತರರು ಇದ್ದರು.