ಪೌಷ್ಟಿಕ ಆಹಾರದಿಂದ ಕ್ಷಯ ದೂರ : ತಹಸೀಲ್ದಾರ್ ಡಿ.ಅರ್ಚನಾ ಭಟ್ ಸಲಹೆ

kit vitarane
ಸೇವಾಂಜಲಿ ಪ್ರತಿಷ್ಠಾನದಲ್ಲಿ ತಹಸೀಲ್ದಾರ್ ಅರ್ಚನಾ ಭಟ್ ಕ್ಷಯ ರೋಗಿಗಳಿಗೆ ಆಹಾರದ ಕಿಟ್ ವಿತರಿಸಿದರು. ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ ಮೊದಲಾದವರಿದ್ದರು.
Published on

ಬಂಟ್ವಾಳ: ಔಷಧದ ಜತೆ ಪೌಷ್ಟಿಕ ಆಹಾರ ಸೇವಿಸಿದಾಗ ಕ್ಷಯ ರೋಗ ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ ಎಂದು ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಹೇಳಿದರು.

ಕ್ಷಯಮುಕ್ತ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ, ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಸೋಮವಾರ ಫರಂಗಿಪೇಟೆಯಲ್ಲಿ ಕ್ಷಯ ರೋಗಿಗಳಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದರು.

ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಮಾತನಾಡಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮರ್ಪಕವಾಗಿ ಕೆಲಸ ಮಾಡಿದಾಗ ಜನರಿಗೆ ಯೋಜನೆಗಳ ಪ್ರಯೋಜನ ಸಿಗುತ್ತದೆ. ಸೇವಾಂಜಲಿ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಯಮಿ ಉಮೇಶ್ ಸಾಲ್ಯಾನ್ ಬೆಂಜನಪದವು, ಮೇರಮಜಲು ಗ್ರಾ.ಪಂ ಮಾಜಿ ಅಧ್ಯಕ್ಷೆ ವೃಂದಾ ಪೂಜಾರಿ, ಉದ್ಯಮಿ ದೇವದಾಸ್ ಶೆಟ್ಟಿ ತುಪ್ಪೆಕಲ್ಲು, ಟ್ರಸ್ಟಿ ದೇವದಾಸ್ ಶೆಟ್ಟಿ ಕೊಡ್ಮಾಣ್ ಉಪಸ್ಥಿತರಿದ್ದರು.

ಪ್ರಮುಖರಾದ ನಾರಾಯಣ ಬಡ್ಡೂರು, ಸುರೇಶ್ ರೈ ಪೆಲಪಾಡಿ, ಕೃಷ್ಣ ತುಪ್ಪೆಕಲ್ಲು, ಉಮಾ ಚಂದ್ರಶೇಖರ್, ಪದ್ಮನಾಭ ಕಿದೆಬೆಟ್ಟು, ವಿಕ್ರಂ ಬರ್ಕೆ, ಪ್ರಶಾಂತ್ ತುಂಬೆ, ಸುಕೇಶ್ ಶೆಟ್ಟಿ ತೇವು, ದಿನೇಶ್ ತುಂಬೆ, ನಾಗಪ್ಪ ಶೆಟ್ಟಿ ಮೇರಮಜಲು, ಕೇಶವ ದೋಟ, ಪ್ರಕಾಶ್ ಕಿದೆಬೆಟ್ಟು, ಆರ್.ಎಸ್.ಜಯ ರಾಮಲ್‌ಕಟ್ಟೆ, ಮಧುರಾಜ್ ಇದ್ದರು. ಟ್ರಸ್ಟಿ ತೇವು ತಾರಾನಾಥ ಕೊಟ್ಟಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net