ಕಡಬ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ ಮತ್ತು ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ಬುಧವಾರ ಮರ್ಧಾಳದ ಪಾಲೆತ್ತಡ್ಕ ದ.ಕ. ಜಿ.ಪ.ಶಾಲೆಯಲ್ಲಿ ನಡೆಯಿತು.
ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ರಾಜೇಂದ್ರ ರೈ ಬೆಳ್ಳಿಪ್ಪಾಡಿ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಜಯರಾಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಮರ್ಧಾಳ ಗ್ರಾಪಂ ಅಧ್ಯಕ್ಷೆ ಪ್ರೇಮ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈ ಮಾತನಾಡಿದರು.
ಬ್ಯಾಂಕ್ ಆಫ್ ಬರೋಡಾ ಮರ್ಧಾಳ ಶಾಖಾಧಿಕಾರಿ ವಿಶಾಖ್ ಎ., ಪ್ರತಿಷ್ಠಾನದ ಗ್ರಾಮ ಸಮಿತಿ ಕಾರ್ಯದರ್ಶಿ ಶಿವ ಪ್ರಸಾದ್ ಕೈಕುರೆ, ಬರೋಡಾ ಬ್ಯಾಂಕ್ ಶಾಖಾಧಿಕಾರಿ ಸುಗುಣ, ಮರ್ಧಾಳ ಗ್ರಾಪಂ ಮಾಜಿ ಅಧ್ಯಕ್ಷ ಎ.ಪಿ.ಚೆರಿಯನ್, ಹರೀಶ್, ಪುತ್ತೂರು ಎ.ಪಿ.ಎಂ.ಸಿ ಮಾಜಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಸಂಪನ್ಮೂಲವ್ಯಕ್ತಿ ಜೀವನ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಿಯಾಜ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ಶ್ರೀನಿವಾಸ್ ರೈ ಮುಂದ್ರಾಡಿ, ಸಾಮಾಜಿಕ ಮುಂದಾಳು ನಾರಾಯಣ ರೈ, ಗ್ರಂಥಪಾಲಕ ನಾಗೇಶ್, ಬಾಲಕೃಷ್ಣ ಗೌಡ ಮತ್ತಿತರರು ಉಪಸ್ಥಿತರಿದ್ದರು.
ರಾಜೇಂದ್ರ ರೈ ಬೆಳ್ಳಿಪ್ಪಾಡಿ ಹಾಗೂ ವಿಶ್ವನಾಥ ರೈ ಅವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕಿ ಶ್ಯಾಮಲ ಸ್ವಾಗತಿಸಿದರು. ಶಿಕ್ಷಕಿ ರೇಖಾ ವಂದಿಸಿದರು. ಸಂಧ್ಯಾ ಸನ್ಮಾನ ಪತ್ರ ವಾಚಿಸಿದರು. ಪ್ರವೀಣ್ ನಿರೂಪಿಸಿದರು.