ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ

20ss1Rotary club solle parade vitarane
ಆಲೂರುಸಿದ್ದಾಪುರ ರೋಟರಿ ಕ್ಲಬ್ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆಗಳನ್ನು ವಿತರಣೆ ಮಾಡಲಾಯಿತು.
Published on

ಶನಿವಾರಸಂತೆ: ಸಮೀಪದ ಆಲೂರು ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಗ್ರಾಪಂ ವ್ಯಾಪ್ತಿಯಲ್ಲಿರುವ ಡೆಂೆ ತಡೆಗಟ್ಟುವ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಲಾಯಿತು.

ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ ಮಲ್ಲೇಶ್ವರ ಸಂಸ್ಥೆಯ ಅಧ್ಯಕ್ಷ ದಯಾನಂದ್ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜ ಸೇವೆಯ ಜತೆಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದೆ. ಶಿಕ್ಷಣ, ಆರೋಗ್ಯ, ಅರಣ್ಯ ಮತ್ತು ಪರಿಸರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಮೂಲಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಮಕ್ಕಳಿಗೆ ಅಗತ್ಯ ಪರಿಕರಗಳ ವಿತರಣೆ ಮಾಡಲಾಗುತ್ತಿದೆ. ಆರೋಗ್ಯ ಹಿತದೃಷ್ಟಿಯಿಂದ ಮತ್ತು ಡೆಂೆ ತಡೆಗಟ್ಟುವ ಉದ್ದೇಶದಿಂದ ರೋಟರಿ ಸಂಸ್ಥೆ ವತಿಯಿಂದ ಅಂಗನವಾಡಿಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಲಾಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣ ಕೃಷ್ಣಾನಂದ್, ರೋಟರಿ ಮಲ್ಲೇಶ್ವರ ಸಂಸ್ಥೆ ಕಾರ್ಯದರ್ಶಿ ಎಚ್.ಇ.ಕಿರಣ್, ಸದಸ್ಯರಾದ ಎ.ಎಸ್.ರಾಮಣ್ಣ, ಉದಯಕುಮಾರ್, ಎ.ಜೆ.ವಿಜಯ್, ಎಂ.ವಿ.ವೆಂಕಟೇಶ್, ಮನೋಹರ್, ಲೋಕೇಶ್, ಸಂಪತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net