

ಕಾಸರಗೋಡು: ಜಿಲ್ಲಾ ಪಂಚಾಯಿತಿ 2024-25ರ ವಾರ್ಷಿಕ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಪರಿಶಿಷ್ಟ ಜಾತಿಗೆ ಸೇರಿದ ಮಿಶ್ರ ಗುಂಪುಗಳಿಗೆ ಸಂಗೀತ ವಾದ್ಯೋಪಕರಣ ವಿತರಿಸಲಾಯಿತು.
ಜಿಪಂ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ವದ್ಯೋಪಕರಣ ವಿತರಣೆಯಯನ್ನು ಉದ್ಘಾಟಿಸಿದರು. ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮನು ಅಧ್ಯಕ್ಷತೆ ವಹಿಸಿದ್ದರು. ಜಿಪಂ ಉಪಾಧ್ಯಕ್ಷ ಶಾನವಾಸ್ ಪಾದೂರು, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಶಕುಂತಳಾ, ವಕೀಲೆ ಎಸ್.ಎನ್.ಸರಿತಾ, ಎಂ.ಮನು, ಗೀತಾಕೃಷ್ಣನ್, ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು, ಇತರರು ಭಾಗವಹಿಸಿದ್ದರು.