ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

12 HANUR 3
ಇಂಡಿಗನತ್ತ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಶ್ರೀಕಂಠ ಹಾಗೂ ನವೀನ್ ಅವರು ಕಲಿಕಾ ಸಾಮಗ್ರಿ ವಿತರಿಸಿದರು.
Published on

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 50 ಮಕ್ಕಳಿಗೆ ಬುಧವಾರ ದಾನಿಗಳಾದ ಕೌದಳ್ಳಿಯ ಶ್ರೀಕಂಠ ಹಾಗೂ ಕನಕಪುರ ಕೋಡಿಹಳ್ಳಿಯ ನವೀನ್ ಅವರು ನೋಟ್‌ಬುಕ್, ಪೆನ್, ಇತರ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.

ದಾನಿಗಳು ಮಾತನಾಡಿ, ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಘಟನೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಲಾಗಿತ್ತು. ಈ ವೇಳೆ ಪಾಲಕರು ಸಂಕಷ್ಟಕ್ಕೆ ಸಿಲುಕಿದ್ದು, ತುಂಬ ತೊಂದರೆಗೆ ಒಳಗಾಗಿದ್ದಾರೆ. ಹಾಗಾಗಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸುವ ಸಲುವಾಗಿ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಂಡು ಕಲಿಕೆಯತ್ತ ಹೆಚ್ಚು ಗಮನಹರಿಸಬೇಕು. ಮುಂದಿನ ದಿನಗಳಲ್ಲಿ ಇನ್ನಷ್ಟು ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕ ರಾಘವೇಂದ್ರ ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net