ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

notebook
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಗುರುವಾರ ನಡೆಯಿತು
Published on

ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಮತ್ತು ಶ್ರೀ ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಗುಜ್ಜಾಡಿ, ಕೊಡಪಾಡಿ ವತಿಯಿಂದ ಶಾಲೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯಿತು.

ಮುಖ್ಯಶಿಕ್ಷಕ ಜಿ.ವಿಶ್ವನಾಥ ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಫಿಲೋಮಿನಾ ಫರ್ನಾಂಡಿಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ಬಿಲ್ಲವ ಯುವ ಮುಖಂಡ ದಿನೇಶ ಬಿಲ್ಲವ, ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ, ನರಸಿಂಹ ಕೆ., ದೇವು ಮಾಸ್ತರ್, ಶಿವಾನಂದ ಜಿ.ಟಿ., ಶ್ರೀಕಾಂತ ಎನ್., ಸಂಜೀವ ಜಿ.ಟಿ., ಸರೋಜ, ಸುಶೀಲಾ, ಸುಮಿತ್ರಾ ಜಿ., ಈಶ್ವರ ಜಿ.ಉಪಸ್ಥಿತರಿದ್ದರು.

ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸುಮಿತ್ರಾ ಜಿ.ಸ್ವಾಗತಿಸಿ, ಗೌರವ ಶಿಕ್ಷಕಿ ಅಕ್ಷತಾ ವಿನಯ್ ನಿರೂಪಿಸಿ, ಗೌರವ ಶಿಕ್ಷಕಿ ಭೂದೇವಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net