ಶಿಕ್ಷಣದಿಂದ ಮಕ್ಕಳ ವ್ಯಕ್ತಿತ್ವ ವಿಕಸನ : ಸುಧಾಕರ ಸಾಲಿಯಾನ್ ಅನಿಸಿಕೆ

New Project (70)
Published on

ಕಿನ್ನಿಗೋಳಿ: ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣ ಅಗತ್ಯ, ಶಿಕ್ಷಣಕ್ಕಾಗಿ ನಡುಗೋಡು ಹಳೇ ವಿದ್ಯಾರ್ಥಿ ಸಂಘ ಉತ್ತಮ ಸಹಕಾರ ನೀಡುತ್ತಿದೆ ಅಭಿನಂದನೀಯ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಸಾಲಿಯಾನ್ ಹೇಳಿದರು.

ನಡುಗೋಡು ಸರ್ಕಾರಿ ಹಿರಿಯ ಶಾಲೆಯಲ್ಲಿ ಹರಿಶ್ಚಂದ್ರ ಆಚಾರ್ಯ ಸಹಕಾರದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಶಾಲೆ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ, ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ನಡೆಯಿತು. ಮೂಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಅತ್ಯುತ್ತಮ ಭಾಷಣಗೈದ ಯಕ್ಷ ಅವರನ್ನು ಸನ್ಮಾನಿಸಲಾಯಿತು. ಪ್ರತಿವರ್ಷ ಶಿಕ್ಷಣಕ್ಕೆ ಸಹಕಾರ ನೀಡುತ್ತಿರುವ ಹರಿಶ್ಚಂದ್ರ ಆಚಾರ್ಯ ಮತ್ತು ಚರಣ್ ಜೆ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರಥಮ ತರಗತಿಗೆ ದಾಖಲಾದ ಎಲ್ಲ ವಿದ್ಯಾರ್ಥಿಗಳ ಹೆಸರಲ್ಲಿ ತಲಾ ಒಂದು ಸಾವಿರ ರೂ.ನಂತೆ ಖಾತೆಯಲ್ಲಿ ಜಮಾ ಮಾಡುವುದಾಗಿ ಭರವಸೆ ನೀಡಿದ ಸುರೇಶ್ ಆಚಾರ್ಯ ಅವರನ್ನು ಅಭಿನಂದಿಸಲಾಯಿತು.

ಯುಗಪುರುಷದ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವಿದ್ಯಾ ಶೆಟ್ಟಿ, ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಮಲ್ಲಿಕಾ ಪ್ರಕಾಶ್ ಆಚಾರ್ಯ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವಿಪ್ರಸಾದ್ ರೈ, ಮಾಜಿ ಅಧ್ಯಕ್ಷ ಗೋವಿಂದ ಪೂಜಾರಿ, ವಾಸುದೇವ ಆಚಾರ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶಾಂತಿ ಭಟ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಐರಿನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ಹೇಮಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ತಿಲಕ್ ರಾಜ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net