ಜನರ ರಕ್ಷಣೆಗಾಗಿ ರೆಡ್‌ಕ್ರಾಸ್ ಸಂಸ್ಥೆ ಉಗಮ: ಜಯಕರ್ ಶೆಟ್ಟಿ

redcross
ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಪ್ರೌಢಶಾಲಾ ವಿಭಾಗದಲ್ಲಿ ವರ್ಷದ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ, ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷ ಜಯಕರ್ ಶೆಟ್ಟಿ, ಕಾರ್ಯದರ್ಶಿ ಶಿವರಾಮ್ ಶೆಟ್ಟಿ, ರೆಡ್‌ಕ್ರಾಸ್ ಕ್ಲಬ್ ಅಧ್ಯಕ್ಷೆ ಸಿಂಚನಾ, ಕಾರ್ಯದರ್ಶಿ ಶ್ರೇಯಸ್ ಉಪಸ್ಥಿತರಿದ್ದರು
Published on

ಗಂಗೊಳ್ಳಿ: ಜನರಿಂದ ಜನರ ರಕ್ಷಣೆಗಾಗಿ ರೆಡ್‌ಕ್ರಾಸ್ ಸಂಸ್ಥೆ ಉಗಮವಾಗಿದೆ. ಆದ್ದರಿಂದ ಎಲ್ಲ ಪ್ರೌಢಶಾಲೆಗಳಲ್ಲಿ ರೆಡ್‌ಕ್ರಾಸ್ ಘಟಕ ಆರಂಭವಾಗಬೇಕಿದೆ ಎಂದು ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷ ಜಯಕರ್ ಶೆಟ್ಟಿ ಹೇಳಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಪ್ರೌಢಶಾಲಾ ವಿಭಾಗದಲ್ಲಿ ವರ್ಷದ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೆಡ್‌ಕ್ರಾಸ್ ಸೊಸೈಟಿ ಸಂಚಾಲಕ ದಿನಕರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಜೀವ ಉಳಿಸುವ ಕೆಲಸಗಳಾದ ಪ್ರಥಮ ಚಿಕಿತ್ಸೆ ಪ್ರಕೃತಿ ವಿಕೋಪ ನಿರ್ವಹಣೆ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳು ತಮ್ಮನ್ನು ಹೆಚ್ಚು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದರು.

ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿ ಕಾರ್ಯದರ್ಶಿ ಶಿವರಾಮ್ ಶೆಟ್ಟಿ, ರೆಡ್‌ಕ್ರಾಸ್ ಕ್ಲಬ್ ಅಧ್ಯಕ್ಷೆ ಸಿಂಚನಾ, ಕಾರ್ಯದರ್ಶಿ ಶ್ರೇಯಸ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಗೆ ಶುಚಿ ಪ್ಯಾಡ್ ಹಾಗೂ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ರೆಡ್‌ಕ್ರಾಸ್ ಘಟಕ ಸಂಚಾಲಕ ಶ್ರೀಕಾಂತ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net