ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ

05-02-Shiva-2
ರಾಯಚೂರಿನ ನಗರಸಭೆ ಆವರಣದಲ್ಲಿ ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಪುಷ್ ಕಾರ್ಟ್ ಸೇವೆಗೆ ಸೋಮವಾರ ಚಾಲನೆ ನೀಡಿದರು. ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ನಗರಸಭೆ ಸದಸ್ಯರಾದ ಜಯಣ್ಣ, ಪವನಕುಮಾರ ಇದ್ದರು.
Published on

ರಾಯಚೂರು: ಸ್ಥಳೀಯ ನಗರಸಭೆ ಕಚೇರಿ ಆವರಣದಲ್ಲಿ ಪೌರಾಡಳಿತ ಖಾತೆ ಸಚಿವ ರಹೀಂ ಖಾನ್ ಸೋಮವಾರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ ಮಾಡಿ, ಪುಷ್ ಕಾರ್ಟ್‌ಗಳ ಸೇವೆಗೆ ಚಾಲನೆ ನೀಡಿದರು.
ಕಾರ್ಮಿಕರಿಗೆ ಜಾಕೇಟ್, ಕೈಗವಸು, ಹೆಲ್ಮೆಟ್, ಮಾಸ್ಮ್ ಸೇರಿದಂತೆ ಇನ್ನಿತರ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಿ, ಕಾರ್ಮಿಕರು ಕೆಲಸದ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಹೊಸದಾಗಿ ಪುಷ್ ಕಾರ್ಟ್ ವಿತರಣೆ ಮಾಡಲಾಗುತ್ತಿದ್ದು, ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು, ನಗರ ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ನಗರಸಭೆ ಸದಸ್ಯರಾದ ಜಯಣ್ಣ, ಪವನಕುಮಾರ, ಜಿಂದಪ್ಪ, ಮುಖಂಡರಾದ ಮಹ್ಮದ್ ಶಾಲಂ, ರವಿ ಜಲ್ದಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net