ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಣೆ

10SPT4
Published on

ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಇತ್ತೀಚೆಗೆ ಯೋಜನಾ ಕಚೇರಿಯಲ್ಲಿ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ವಿತರಿಸಿದರು.

ಕ್ಷೇತ್ರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದ್ದು, ಶಾಲೆಗಳಿಗೆ ಪೀಠೋಪಕರಣ, ಜ್ಞಾನದೀಪ ಶಿಕ್ಷಕರ ನೇಮಕ, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ, ಶಿಷ್ಯ ವೇತನ ಪಾವತಿ ಇಂತಹ ಹಲವು ಯೋಜನೆಗಳು ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗಿದೆ ಎಂದು ಹೇಳಿದರು.

ಯೋಜನೆ ವತಿಯಿಂದ ಜಿಲ್ಲೆಯ 15 ಶಾಲೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು ಮಾಹಿತಿ ನೀಡಿದರು. ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net