

ಬೆಳ್ತಂಗಡಿ: ಕರಾವಳಿ ಕೃಷಿಗೆ ಪೂರಕ ವಾತಾವರಣವಿದೆ. ಯುವ ಮನಸ್ಸುಗಳು ಕೃಷಿಯ ಕಡೆ ಆಕರ್ಷಿತರಾಗಬೇಕು. ಕೃಷಿಕರಿಗೆ ಕಾಳುಮೆಣಸು, ಜಾಯಿಕಾಯಿ ಕೃಷಿ ಮಾಹಿತಿ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಶನಿವಾರ ಕೆದ್ದು ಶ್ರೀ ದೀಪಾ ಸಭಾಭವನದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಕಾಳು ಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಸಸಿ ವಿತರಣೆ ಕಾರ್ಯಕ್ರಮ ನೆರವೇರಿಸಿದರು. ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಅಧ್ಯಕ್ಷತೆ ವಹಿಸಿದ್ದರು. ಶಂಕರ್ ಭಟ್ ಕಟ್ಟೂರು, ಈಶ್ವರ ಪೂಜಾರಿ ಬಿರ್ಮಜಿ-ಕುದ್ಯಾಡಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರಿಗೆ ಉಚಿತ ಕಾಳು ಮೆಣಸಿನ ಗಿಡ ವಿತರಿಸಲಾಯಿತು.
ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ., ಬೆಳ್ತಂಗಡಿ ತೋಟಗಾರಿಕಾ ಇಲಾಖೆ ಬಿಮರಾಯ್, ಬಳಂಜ ಗ್ರಾಪಂ ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಗ್ರಾಪಂ ಅಧ್ಯಕ್ಷೆ ಸರಸ್ವತಿ, ಸುಲ್ಕೇರಿ ಗ್ರಾಪಂ ಉಪಾಧ್ಯಕ್ಷ ಶುಭಕರ ಪೂಜಾರಿ, ಸಂಪನ್ಮೂಲ ವ್ಯಕ್ತಿಗಳಾಗಿ ಯಶಸ್ವಿ ಕಾಳುಮೆಣಸು ಕೃಷಿಕ ಸುರೇಶ್ ಬಲ್ನಾಡು, ಜಾಯಿಕಾಯಿ ಕೃಷಿ ಸಾಧಕ ಟಿ.ಆರ್.ಸುರೇಶ್ಚಂದ್ರ ತೊಟ್ಟೆತ್ತೋಡಿ, ಕಾಳುಮೆಣಸು, ಸಿಲ್ವರ್ ವೋಕ್, ಕಾಫಿ ಬೆಳೆಗಾರ ಅಜಿತ್ ಪ್ರಸಾದ್ ರೈ ಕಾಯರ್‌ತಡಿ, ಪುತ್ತೂರು, ಅಳದಂಗಡಿ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ ಉಪಸ್ಥಿತರಿದ್ದರು.
ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷ ಜನಾದರ್ನ ಪೂಜಾರಿ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ಹೇಮಂತ್, ಕೊರಗಪ್ಪ, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ.ಕೆ., ದೇಜಪ್ಪ ಪೂಜಾರಿ, ಧರ್ಣಪ್ಪ, ಸುಂದರಿ, ಸುಂದರಿ, ಮಮತಾ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.
ಅಧ್ಯಕ್ಷ ರಾಕೇಶ್ ಹೆಗ್ಡೆ ಸ್ವಾಗತಿಸಿ, ಸಮೀಕ್ಷಾ ಪೂಜಾರಿ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ವಂದಿಸಿದರು, ದಿನೇಶ್ ಪಿ.ಕೆ., ವಿಶ್ವನಾಥ ಹೊಳ್ಳ ಸನ್ಮಾನಿತರನ್ನು ಪರಿಚಯಿಸಿದರು.
ಕೃಷಿಯಿಂದ ಬದುಕು ಕಟ್ಟಿಕೊಂಡಿರುವ ಲಕ್ಷಾಂತರ ಕುಟುಂಬಗಳು ಇಂದು ಸುಂದರ ಜೀವನ ನಡೆಸುತ್ತಿವೆ. ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಕೃಷಿ ಮಾಡಿದರೆ ಇಳುವರಿ ಹೆಚ್ಚಿಸಲು ಸಾಧ್ಯವಿದೆ. - ಕುಶಾಲಪ್ಪ ಗೌಡ, ನಿರ್ದೇಶಕ, ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ https://www.vijayavani.net/awareness-of-cyber-frauds https://www.vijayavani.net/gas-leakage