ಕರಿಯಂಗಳದಲ್ಲಿ ಸಸಿ ವಿತರಣೆ

aasare
Published on

ಗುರುಪುರ: ಕರಿಯಂಗಳ ಗ್ರಾಮದ ಪೊಳಲಿಯ ಆಸರೆ ಸೇವಾ ಫೌಂಡೇಶನ್ ವತಿಯಿಂದ ಜು.31ರಂದು ಗ್ರಾಮದ ಸಾಧಕರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಪರಿಸರದ ಮೇಲಿನ ಕಾಳಜಿಯಿಂದ ನಾಗರಿಕ ಬಂಧುಗಳಿಗೆ ಸಸಿ ವಿತರಿಸಲಾಯಿತು.

ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಹಾಗೂ ಕರಿಯಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಮಾತನಾಡಿ, ನಮ್ಮೂರಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲು ಸಂತೋಷವಾಗುತ್ತದೆ. ನಮ್ಮ ಗ್ರಾಮದಲ್ಲೂ ಐಎಎಸ್, ಐಪಿಎಸ್, ಕೆಎಎಸ್‌ನಂತಹ ಉನ್ನತ ಸ್ಥಾನಮಾನದ ಅಭ್ಯರ್ಥಿಗಳು ಹುಟ್ಟಿಕೊಳ್ಳಬೇಕು. ಗ್ರಾಮದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಬೆಂಬಲವಿದ್ದೇ ಇದೆ. ಗುರಿ ಇಟ್ಟುಕೊಂಡು ಸಾಧನೆ ಮಾಡಿ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 550ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಗಣೇಶ್ ಕಲ್ಕುಟ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳೂರು ಬಂಟರ ಸಂಘದ ಅಧ್ಯಕ್ಷ ಕೆ. ಜನಾರ್ದನ ಶೆಟ್ಟಿ, ಉಪಾಧ್ಯಕ್ಷೆ ವೀಣಾ ಆಚಾರ್ಯ, ಬಶೀರ್ ಬಡಕಬೈಲ್, ರಾಜು ಕೋಟ್ಯಾನ್, ರೋಶನ್ ಪುಂಚಮೆ, ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಬಶೀರ್ ಬಡಕಬೈಲ್ ಸ್ವಾಗತಿಸಿದರು. ಲಕ್ಷ್ಮೀಶ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net