ಪಾರಣೆಯಲ್ಲಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ

25..npk..5,
ಪಾರಾಯಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಲಾಯಿತು.
Published on

ನಾಪೋಕ್ಲು: ಇಲ್ಲಿಗೆ ಸಮೀಪದ ಪಾರಾಯಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಶೂ ಮತ್ತು ಸಾಕ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಶಾಲಾ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ, ವಿದ್ಯಾರ್ಥಿಗಳಿಗೆ ಪಾದರಕ್ಷೆಗಳನ್ನು ವಿತರಿಸಿ ಮಾತನಾಡಿ, ಸರ್ಕಾರದಿಂದ ಎಲ್ಲ ಸೌಲಭ್ಯವು ವಿದ್ಯಾರ್ಥಿಗಳಿಗೆ ಉಚಿತವಾಗಿ ದೊರೆಯುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಹಾಗಾದರೆ ಮಾತ್ರ ಸರ್ಕಾರದ ಇಂತಹ ಯೋಜನೆಗಳಿಗೆ ಅರ್ಥ ಲಭಿಸಲಿದೆ ಎಂದು ಕಿವಿಮಾತು ಹೇಳಿದರು. ಶಾಲಾ ಮುಖ್ಯಶಿಕ್ಷಕ ವೇದಪ್ರಸಾದ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net