

ಬೈಲಕುಪ್ಪೆ: ನವಿಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಶೋ ಮತ್ತು ಸಾಕ್ಸ್ ಗಳನ್ನು ವಿತರಿಸಲಾಯಿತು.
ಪಿರಿಯಾಪಟ್ಟಣ ತಾಲೂಕಿನ ನವಿಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಶಾಲಾ ಮುಖ್ಯ ಶಿಕ್ಷಕ ಕೆ.ಎಸ್.ಯುವರಾಜ್ ಮಾತನಾಡಿ, ಕಾಡಂಚಿನ ಗ್ರಾಮವಾದ ನವಿಲೂರು ಗ್ರಾಮದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚು ವಾಸಿಸುತ್ತಿದ್ದು, ಸರ್ಕಾರದಿಂದ ಸಿಗುವ ಈ ಸೌಲತ್ತು ಶಾಲಾ ಮಕ್ಕಳಿಗೆ ತುಂಬಾ ಅನುಕೂಲವಾಗಿದೆ. 2024-25ನೇ ಸಾಲಿನ 1 ರಿಂದ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ 44 ವಿದ್ಯಾರ್ಥಿಗಳಿಗೆ ಸಾಕ್ಸ್, ಶೋ ವಿತರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನವಿಲೂರು ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷೆ ಸರೋಜಾ ಪ್ರಕಾಶ್, ಎಸ್‌ಡಿಎಂಸಿ ಅಧ್ಯಕ್ಷ ಗಣೇಶ್, ಸದಸ್ಯರಾದ ಪ್ರಿಯಾ ಶೇಖರ್, ಗೀತಾ, ಶಿಕ್ಷಕರಾದ ಮಧು, ಮಂಜುನಾಥ್ ಇದ್ದರು.