ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಣೆ

sasthana
ಗುಂಡ್ಮಿ ಸರ್ಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಲೇಖನ ಸಾಮಗ್ರಿಗಳನ್ನು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್‌ನ ರಾಷ್ಟ್ರೀಯ ಉಪಾಧ್ಯಕ್ಷ ಹುಸೇನ್ ಹೈಕಾಡಿ ವಿತರಿಸಿದರು.
Published on

ಕೋಟ: ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಸಾಸ್ತಾನ ವತಿಯಿಂದ ಬುಧವಾರ ಗುಂಡ್ಮಿ ಸರ್ಕಾರಿ ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳಿಗೆ ಸೀನಿಯರ್ ಚೇಂಬರ್ ಇಂಟರ್‌ನಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ಹುಸೇನ್ ಹೈಕಾಡಿ ಶಾಲಾ ಲೇಖನ ಸಾಮಗ್ರಿ ವಿತರಿಸಿದರು.

ಸಂಸ್ಥೆಯ ಸಾಸ್ತಾನ ಲೇಜಿನ್ ಅಧ್ಯಕ್ಷ ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಹಂಗಾರಕಟ್ಟೆ ಸಾಸ್ತಾನ ನಿಕಟಪೂರ್ವ ಅಧ್ಯಕ್ಷ ಅರವಿಂದ ಶರ್ಮ, ಸಾಸ್ತಾನ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಲೇಜಿನ್ ಉಪಾಧ್ಯಕ್ಷ ರವೀಂದ್ರ ಕಾಮತ್ ಗುಂಡ್ಮಿ, ಕೈಂಡ್ ಹಾರ್ಟ ಟ್ರಸ್ಟ್ ಆಡಳಿತ ಟ್ರಸ್ಟಿ ಹೆನ್ರಿ ಲೂವಿಸ್ ಬ್ರಹ್ಮಾವರ, ಕೋಟ ಲೇಜಿನ್ ಅಧ್ಯಕ್ಷ ಕೇಶವ ಆಚಾರ್, ಮುಖ್ಯ ಶಿಕ್ಷಕಿ ಉಷಾ ಉಪಸ್ಥಿತರಿದ್ದರು. ಸಾಸ್ತಾನ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಲೇಜಿನ್ ಕೋಶಾಧಿಕಾರಿ ಬಾಲಕೃಷ್ಣ ಪೂಜಾರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net