ಧರ್ಮಸ್ಥಳ ಯೋಜನೆಯಿಂದ ಮಾತೃ ವಾತ್ಸಲ್ಯ

scholership
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ಹಾಗೂ ವಿವಿಧ ಸೌಲಭ್ಯ ವಿತರಿಸಲಾಯಿತು
Published on

ಕುಂದಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾತೃ ವಾತ್ಸಲ್ಯ ನೀಡುವ ಸಂಸ್ಥೆ. ಶಿಕ್ಷಣಕ್ಕೆ ಪೂರಕವಾಗಿ ಜ್ಞಾನದೀಪ ಶಿಕ್ಷಕರ ನಿಯೋಜನೆ, ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸರ್ಕಾರಿ ಶಾಲೆಗಳಿಗೆ ಪೀಠೋಪಕರಣ ಜತೆಗೆ ಶಿಕ್ಷಣ, ಆರೋಗ್ಯ ಮಹಿಳಾ ಸಬಲೀಕರಣದಂತ ಕಾರ್ಯಕ್ರಮ ನಡೆಸುತ್ತಿರುವ ಗ್ರಾಮಾಭಿವೃದ್ಧಿ ಯೋಜನೆ ಕಲಿಯುಗದ ಕಲ್ಪವೃಕ್ಷ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕುಂದಾಪುರ ತಾಲೂಕು, ಕುಂದಾಪುರ ಮತ್ತು ಕುಂದಾಪುರ 02 ಯೋಜನಾ ಕಚೇರಿ ಆಶ್ರಯದಲ್ಲಿ ಕೋಟೇಶ್ವರದ ಸಭಾಭವನದಲ್ಲಿ ಗುರುವಾರ ಕುಂದಾಪುರ ತಾಲೂಕ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ಹಾಗೂ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ರಟ್ಟಾಡಿ ನವೀನಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಯೋಜನೆ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಗ್ರಾಮಾಭಿವೃದ್ಧಿ ಯೋಜನೆ ವಿವಿಧ ಜನ ಸಮುದಾಯ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ, ವಕೀಲ ಉಮೇಶ್ ಶೆಟ್ಟಿ ಶಾನ್ಕಟ್ಟು, ಎಲ್‌ಐಸಿ ಪ್ರಬಂಧಕ ದಿನೇಶ್ ಪ್ರಭು, ಭಜನಾ ಮಂಡಳಿ ಅಧ್ಯಕ್ಷ ರಾಜೇಂದ್ರ ಕುಮಾರ ಬಸ್ರೂರು, ರಥಶಿಲ್ಪಿ ರಾಜಗೋಪಾಲ್ ಆಚಾರ್ಯ, ಉದ್ಯಮಿ ಸುಬ್ರಹ್ಮಣ್ಯ ಶೆಟ್ಟಿ ಕೋಟೇಶ್ವರ, ಕೆಡಿಆರ್‌ಡಿಪಿ ನಿರ್ದೇಶಕ ನಾಗರಾಜ್ ಶೆಟ್ಟಿ, ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ ಕೆರೆಕಟ್ಟೆ ಮತ್ತು ಸುಬ್ರಹ್ಮಣ್ಯ ಆಚಾರ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ನಾರಾಯಣ ಪಾಲನ್ ಸ್ವಾಗತಿಸಿದರು. ಮೇಲ್ವಿಚಾರಕಿ ವೇದಾವತಿ ವಂದಿಸಿದರು. ಯೋಜನಾಧಿಕಾರಿ ಪಾರ್ವತಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net