

ಮಡಿಕೇರಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಮಡಿಕೇರಿ ಶಾಸಕರು ಶುಕ್ರವಾರ ಟ್ಯಾಬ್ ವಿತರಿಸಿದರು.
ಶಾಸಕರಾದ ಕೆ.ಜಿ.ಬೋಪಯ್ಯರವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು. ಮಡಿಕೇರಿ ತಾಲೂಕಿನ ವಿದ್ಯಾರ್ಥಿಗಳಿಗೆ ಒಟ್ಟು ೫೦ ಟ್ಯಾಬ್‌ಗಳನ್ನು ಶಾಸಕದ್ವಯರು ವಿತರಿಸಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಕುಟುಂಬದ ಮಕ್ಕಳಿಗೆ ಟ್ಯಾಬ್‌ನ್ನು ವಿತರಿಸಲಾಗುತ್ತಿದ್ದು, ಈ ಸೌಲಭ್ಯವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವಂತೆ ಸಲಹೆ ಮಾಡಿದರು.
ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಪ್ರಮುಖರಾದ ಕಾಂಗಿರ ಸತೀಶ್, ಕೋಡಿರ ಪ್ರಸನ್ನ, ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಇತರರು ಇದ್ದರು.