

ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ಶಾಸಕ ಕೆ.ಹರೀಶ್‌ಗೌಡ ವಿತರಿಸಿದರು.
ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿ ಶನಿವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಶೇ.5 ಅನುದಾನದಲ್ಲಿ ಅಗತ್ಯವಿರುವ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಅವರು, ಅಂಗವಿಕಲರು ಎಂದರೇ ಅಸಮರ್ಥರು ಎನ್ನುವ ತಪ್ಪು ಭ್ರಮೆ ಬೇಡ. ಅವರಲ್ಲಿಯೂ ವಿಶೇಷ ಸಾಮರ್ಥ್ಯ ಇರುತ್ತದೆ. ನಿರಂತರ ಶ್ರಮ ವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಡಾ.ಡಿ ತಿಮ್ಮಯ್ಯ, ನಗರ ಪಾಲಿಕೆ ಸದಸ್ಯ ಎಂ.ಡಿ.ನಾಗರಾಜ್, ಮೋಹನ್ ಇತರರಿದ್ದರು.