ಗ್ರಾಪಂನಿಂದ ವಿಕಲಚೇತನರಿಗೆ ಪರಿಕರ ವಿತರಣೆ

5ldh1
ನಂದಿಬಟ್ಟಲು ಗ್ರಾಪಂ ಆವರಣದಲ್ಲಿ ವಿವಿಧ ಯೋಜನೆಗಳ ಮೂಲಕ ವಿಕಲಚೇತನರಿಗೆ ಮಂಚ ಇನ್ನಿತರ ಪರಿಕರಗಳನ್ನು ಗ್ರಾಪಂ ಅಧ್ಯಕ್ಷ ಎ.ಅಬುಬಕರ್ ಕುಟ್ಟಿ ವಿತರಿಸಿದರು.
Published on

ಲಿಂಗದಹಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಕಲಚೇತನರು, ನಿರ್ಗತಿಕರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಲಾನುಭವಿಗಳಿಗೆ ಅನೇಕ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದ್ದು, ಅಗತ್ಯವುಳ್ಳವರು ಇವುಗಳ ಸದುಪಯೋಗ ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ನಂದಿಬಟ್ಟಲು ಗ್ರಾಪಂ ಅಧ್ಯಕ್ಷ ಎ.ಅಬುಬಕರ್ ಕುಟ್ಟಿ ಹೇಳಿದರು.
ಸೋಮವಾರ ನಂದಿಬಟ್ಟಲು ಗ್ರಾಪಂ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ವ್ಯಾಪ್ತಿಯ 20 ಅಂಗವಿಕಲರಿಗೆ ಶಾಸನ ಬದ್ಧ ಯೋಜನೆ ವರ್ಗ 1ರ ಮೂಲಕ ಶೇ.3ರ ಅನುದಾನದಲ್ಲಿದ್ದ 65,000ರೂ.ಗಳ ಅಂದಾಜು ವೆಚ್ಚದಲ್ಲಿ ಮಂಚ ಇನ್ನಿತರೆ ಪರಿಕರಗಳನ್ನು ವಿತರಿಸಿ ಮಾತನಾಡಿ, ನಂದಿಬಟ್ಟಲು ಗ್ರಾಪಂ ವ್ಯಾಪ್ತಿಯಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರು ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರು ವಾಸಿಸುತ್ತಿದ್ದು, ಗ್ರಾಪಂನಲ್ಲಿ ಲಭ್ಯವಿರುವ ಅನುದಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸೇರಿದಂತೆ ಅಗತ್ಯವುಳ್ಳವರಿಗೆ ವಿವಿಧ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಕೊಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪಿಡಿಒ ಎನ್.ಎಸ್. ನಾಗರಾಜಪ್ಪ ಮಾತನಾಡಿ, ನಂದಿಬಟ್ಟಲು ಗ್ರಾಪಂ ವ್ಯಾಪ್ತಿಯಲ್ಲಿ ಅನೇಕ ಗ್ರಾಮಗಳು ಸೇರಿದಂತೆ ಕಾಫಿ ತೋಟಗಳ ವ್ಯಾಪ್ತಿ ಹೊಂದಿರುವ ಕಾರಣ ಇಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಕುಡಿಯುವ ನೀರಿನ ಸೌಲಭ್ಯ, ಬೀದಿದೀಪ ಮುಂತಾದ ಮೂಲ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net