ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ವಿತರಣೆ

25adarshkdga3
Published on

ಮಡಿಕೇರಿ: ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಶಾಲೆಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರು ಸಮವಸ್ತ್ರ ಮತ್ತು ಶೂ ವಿತರಿಸಿದರು.

ಈ ಸಂದರ್ಭ ಕೆ.ನಿಡುಗಣೆ ಗ್ರಾ.ಪಂ ಸದಸ್ಯರಾದ ಜಾನ್ಸನ್ ಪಿಂಟೋ, ಅನಿತಾ ಸ್ಥಳೀಯರಾದ ಪ್ರೇಮ್ ಕುಮಾರ್, ಕೃಷ್ಣಪ್ಪ, ಶಾಲೆಯ ಮುಖ್ಯ ಶಿಕ್ಷಕಿ ಶಾಲಿನಿ, ಅಂಗನಾವಡಿ ಸಹಾಯಕಿ ಜಯಂತಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net