ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

uniform
ಉಚಿತ ಸಮವಸ್ತ್ರ ವಿತರಣೆ
Published on

ಕೊಕ್ಕರ್ಣೆ: ಇಲ್ಲಿನ ಕುಮುದಾ ಉಮಾಶಂಕರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಥಮ ಮತ್ತು ದ್ವಿತೀಯ ಡಿಇಎಲ್‌ಇಡಿಯಲ್ಲಿ ಶಿಕ್ಷಕರ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ರಾಂತ ಪ್ರಾಂಶುಪಾಲ ಬಿ. ಸುಬ್ರಹ್ಮಣ್ಯ ಉಡುಪ ತಮ್ಮ ವತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಾಡಿದರು. ಸಂಸ್ಥೆಯ ವತಿಯಿಂದ ಸುಬ್ರಹ್ಮಣ್ಯ ಉಡುಪ ಅವರಿಗೆ ಗೌರವಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯ ಸಂಜೀವ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು. ಪ್ರಾಂಶುಪಾಲ ಸುರೇಶ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ವಿಜಯ್ ಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net